ಬೆಳಗಾವಿ : ರಾಜ್ಯದಿಂದ ಮಹಾರಾಷ್ಟ್ರದ ವಿವಿಧ ನಗರ ಹಾಗೂ ಪಟ್ಟಣಗಳಿಗೆ ಗುರುವಾರದಿಂದ ಬಸ್ ಸಂಚಾರ ಆರಂಭಗೊಂಡಿದೆ.
ಬೆಳಗಾವಿ ಸೇರಿ ವಿವಿಧ ವಿಭಾಗಗಳ ಬಸ್ ಗಳನ್ನು ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಕೊಲ್ಹಾಪುರ, ನಾಸಿಕ್, ಮುಂಬೈ, ಪುಣೆ ಮತ್ತಿತರ ನಗರಗಳಿಗೆ ಸಂಚರಿಸುತ್ತಿದೆ. ಬೆಳಗಾವಿ ಗಡಿ ವಿವಾದ ತಾರಕಕ್ಕೇರಿದ ಪರಿಣಾಮ ಬುಧವಾರ ಬೆಳಗ್ಗೆಯಿಂದ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಮತ್ತೆ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ನಿರಾಳರಾಗಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು.
ಈ ಹಿನ್ನೆಲೆ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಇನ್ನೂ. ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆ ಪ್ರಯಾಣಿಕರು ಪರದಾಡಿದ್ದಾರೆ. ಮಹಾಪುಂಡರ ಪುಂಡಾಟಿಕೆ ಖಂಡಿಸಿ ಕರವೇ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿ ಎಂಇಎಸ್ ಹಾಗೂ ಶಿವಸೇನೆ ಪುಂಡರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ: ಪ್ರಧಾನ ಮಂತ್ರಿ ʻಸ್ವನಿಧಿʼ ಯೋಜನೆ ವಿಸ್ತರಣೆ, ಇಲ್ಲಿದೆ ಮಾಹಿತಿ
ಇಂದು ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗಿ : ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ