ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ನೇತೃತ್ವದ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ಅವರು ಆತ್ಮಹತ್ಯೆ ಹಿಂದಿನ ಕಾರಣ ಏನು? ಒತ್ತಡ ಏನಾದ್ರೂ ಇತ್ತಾ? ಅಥವಾ ಬೇರೆ ಏನಾದರೂ ಕಾರಣವಾಗಿದ್ಯಾ ಎನ್ನುವ ಕುರಿತಂತೆಯೂ ತನಿಖೆ ನಡೆಯಲಿದೆ ಎಂದರು.
ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಈ ತಂಡದಲ್ಲಿ ಇರುತ್ತಾರೆ. ಈ ಎಸ್ಐಟಿ ಅಧಿಕಾರಿಗಳ ತಂಡವು ಸಿಜೆ ರಾಯ್ ಆತ್ಮಹತ್ಯೆ ಹಿಂದಿನ ಕಾರಣ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದರು.
BREAKING: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ‘SIT ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








