ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ.
ನಗರದ ಮಹದೇವಪುರದ ಅಂಬಲಿಪುರದಲ್ಲಿರುವ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಇದೀಗ ನಾವೇಲ್ಲ ಭೇಟಿ ನೀಡಿ ಸಾಂತ್ವನ ಹೇಳಿದ್ದೇವೆ. ರಿಪೇರಿ ಮಾಡಲಾಗದಷ್ಟು ನೋವಾಗಿದೆ ಪ್ರದೀಪ್ ಕುಟುಂಬಕ್ಕೆ, ದುರಂತ್ಯ ಅಂತ್ಯವಾಗಿರುವ ಪ್ರದೀಪ್ ಕುಟುಂಬಕ್ಕೆ ದುಃಖ ಹಂಚಿಕೊಳ್ಳಲು ಬಂದಿದ್ದೇವೆ.
ಅತಿರೇಕದ ನಿರ್ಧಾರ ಪ್ರದೀಪ್ ತೆಗೆದುಕೊಂಡಿದ್ದಾರೆ. ಸಂತೋಷ್ ಪಾಟೀಲ್, ಪ್ರದೀಪ್, ಪ್ರಸಾದ್ ಇವೆಲ್ಲ ಕೇವಲ ಹೆಸರುಗಳಲ್ಲ ಭ್ರಷ್ಟ ಸರ್ಕಾರದಿಂದ ಆಗುತ್ತಿರುವ ಸಾವುಗಳಿವೆ ಇವು ಎಂದರು.40% ಕಮಿಷನ್ ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ. ಸಂತೋಷ್ ಪಾಟೀಲ್ ಕೂಡ ಬಿಜೆಪಿ ಲೀಡರ್ ಆಗಿದ್ದ ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು. ಪ್ರಸಾದ್ ಸಾವಿಗೂ ಹಣಕಾಸಿನ ಸಮಸ್ಯೆಯೇ ಕಾರಣವಾಗಿತ್ತು, ಬಿಜೆಪಿ ನಾಯಕರು ಯಾಕೆ ಹಣಕಾಸಿನ ವ್ಯವಹಾರಗಳಲ್ಲಿ ತಲೆ ಹಾಕುತ್ತಿದ್ದಾರೆ ಎಂದರು.