ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು ಹಾಗಾಗಿ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಅಂಬಿ ವೈ ವಿಜಯೇಂದ್ರ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ನೀಡುವ ವಿಚಾರವಾಗಿ ವರಿಷ್ಠರ ಜೊತೆಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಬಿಜೆಪಿ 2:1 ಅನುಪಾತದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದ್ದು, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಇನ್ನೂ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬುದರ ಕುರಿತು ಬಿಜೆಪಿ ವರಿಷ್ಠರು ಎಚ್ ಡಿ ಕುಮಾರಸ್ವಾಮಿ ಅವರಿಗೆ ಜವಾಬ್ದಾರಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಂದು ಕಡೆ ಈ ಬಾರಿ ಟಿಕೆಟ್ ನನಗೆ ಎಂದು ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಹೇಳಿಕೆ ನೀಡಿದ್ದಾರೆ. ಹಾಗಾಗಿ ಬಿ ವೈ ವಿಜಯೇಂದ್ರ ಅವರಿಗೆ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವುದು ದೊಡ್ಡ ಸವಾಲಾಗಿದೆ. ಹಾಗಾಗಿ ಅವರು ನಾಳೆ ದೆಹಲಿಗೆ ಪ್ರಯಾಣಿಸಲಿದ್ದು, ವರಿಷ್ಠರ ಜೊತೆಗೆ ಚರ್ಚಿಸಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡುವ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿದು ಬಂದಿದೆ.