ಸುಭಾಷಿತ :

Saturday, December 7 , 2019 6:57 PM

ರಾಣೆಬೆನ್ನೂರು ಬೈಎಲೆಕ್ಷನ್ ಗೆ ಬಿಗ್ ಟ್ವಿಸ್ಟ್ : ಬಿ.ವೈ. ವಿಜೇಯಂದ್ರಗೆ ಬಿಜೆಪಿ ಟಿಕೆಟ್!?


Friday, November 15th, 2019 10:28 am

ಹಾವೇರಿ : ಉಪಚುನಾವಣೆಗೆ ಬಿಜೆಪಿಯಿಂದ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಲಾಗುತ್ತದೆಂಬ ಕುತೂಹಲ ಮನೆಮಾಡಿದೆ.ಈ ನಡುವೆ ರಾಣೆಬೆನ್ನೂರು ಕ್ಷೇತ್ರದಿಂದ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

ರಾಣಿಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಅವರಿಗೆ ಟಿಕೆಟ್ ನೀಡುವುದಿಲ್ಲ. ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎನ್ನಲಾಗಿದ್ದು, ರಾಣೆಬೆನ್ನೂರು ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಅಧಿಕವಾಗಿದ್ದು, ಅದೇ ಸಮುದಾಯಕ್ಕೆ ಸೇರಿದ ಬಿ.ವೈ. ವಿಜಯೇಂದ್ರ ಅವರನ್ನು ನಿಲ್ಲಿಸಿದರೆ ಸುಲಭವಾಗಿ ಗೆಲ್ಲಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ.

ಇನ್ನು ರಾಣಿಬೆನ್ನೂರು ಕ್ಷೇತ್ರದಲ್ಲಿ ಒಂದು ವೇಳೆ, ಆರ್.ಶಂಕರ್ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ತಮಗೇ ಟಿಕೆಟ್ ನೀಡಿ, ನಾನು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆಂದು ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ್ ಸಜ್ಜನ್ ಬೇಡಿಕೆ ಮುಂದಿಟ್ಟಿದ್ದಾರೆ. ಜೊತಗೆ ರಾಣಿಬೆನ್ನೂರು ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಡವಿದ್ದು, ಹೈಕಮಾಂಡ್ ಇನ್ನು ಯಾರಿಗೆ ಟಿಕೆಟ್ ನೀಡಲಿದೆ ಎಂಬುದನ್ನು ಕಾದು ನೋಡಬೇಕು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions