ಮಂಡ್ಯ: ಮಾಜಿ ಮುಖ್ಯಮಂಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭಾವೀ ಸಂಸದರು ಎಂದ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು; ದೇಶದ ಭವಿಷ್ಯ ರೂಪಿಸುವ ಮಹಾಚುನಾವಣೆಗೆ ನಾವೆಲ್ಲರೂ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರತಿಪಾದಿಸಿದರು.
ಮಂಡ್ಯದಲ್ಲಿ ನಡೆದ ಜೆಡಿಎಸ್-ಬಿಜೆಪಿ ಮುಖಂಡರು, ಕಾರ್ಯಕರ್ತರ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಅವರು; ರಾಜ್ಯದಲ್ಲಿ ಯಾರೂ ಭಾವಿಸಿರಲಿಲ್ಲ. ಒಂಭತ್ತು ತಿಂಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಈಗ ರಾಜ್ಯದಲ್ಲಿ ಭೀಕರ ಬರಗಾಲವಿದೆ. 800ಕ್ಕೂ ಹೆಚ್ಚು ರೈತರ ಆತ್ಮಹತ್ಯೆಗಳು ಆಗಿವೆ. ಜನ-ಜಾನುವಾರುಗಳು ಕುಡಿಯುವ ನೀರು, ಮೇವಿಲ್ಲದೆ ಪರಿತಪಿಸುತ್ತಿದೆ. ಕಷ್ಟದಲ್ಲಿರುವ ಜನರ ಬಗ್ಗೆ ಕನಿಕರ ಇಲ್ಲದ ಸಿಎಂ ಇದ್ದಾರೆ. ಅವರು ಒಂದು ವರ್ಗದ ಸಿಎಂ ಅಲ್ಲ, ಆರೂವರೆ ಕೋಟಿ ಜನರ ಸಿಎಂ ಎಂದು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಜಾತಿ ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದೆ ಕಾಂಗ್ರೆಸ್. ಬಿಜೆಪಿ-ಜೆಡಿಎಸ್ ಒಂದಾಗ್ತಿದ್ದಂತೆ ಕಾಂಗ್ರೆಸ್ಗೆ ನಿದ್ರೆ ಬರ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ತತ್ತರಿಸಿ ಹೋಗಿದ್ದಾರೆ. ಭಯದಿಂದ ಮಂತ್ರಿ ಮಂಡಲದ ಸದಸ್ಯರು ಚುನಾವಣೆ ಅಭ್ಯರ್ಥಿ ಆಗಲಿಲ್ಲ. ಜನರಿಂದ ಜನರಿಗಾಗಿ ಇರುವ ಕುಮಾರಸ್ವಾಮಿ ಮಂಡ್ಯದಿಂದ ಸಂಸದರಾಗಬೇಕು. 28 ಕ್ಷೇತ್ರಗಳಲ್ಲಿ ನಮ್ಮ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ. 28ಕ್ಕೆ 28 ಗೆಲ್ಲುವುದೇ ನಮ್ಮ ಗುರಿ. ಮೈಮರೆಯವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಅವರು, ದೇವೇಗೌಡರು, ಯಡಿಯೂರಪ್ಪ ಅವರು ಎಲ್ಲರೂ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ನಾವೇ ನಾಯಕರು, ಅಭ್ಯರ್ಥಿ ಎಂದು ತಿಳಿದು ಕೆಲಸ ಮಾಡಬೇಕು. ಚುನಾವಣೆ ಮುಗಿಯುವವರೆಗೂ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಮಂಡ್ಯದಿಂದಲೇ ಮೊದಲ ಫಲಿತಾಂಶ ಬರಬೇಕು ಎಂದು ವಿಜಯೇಂದ್ರ ಅವರು ಒತ್ತಿ ಹೇಳಿದರು.
ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ- ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್
BREAKING : ಬಾಗಲಕೋಟೆ : ಚಲಿಸುತ್ತಿದ್ದ ‘KSRTC’ ಬಸ್ ನಿಂದ ಬಿದ್ದು ‘ವಿದ್ಯಾರ್ಥಿನಿ’ ಸಾವು