ದಾವಣಗೆರೆ: ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣವು ಮತ್ತೊಂದು ಶಕ್ತಿ ಪ್ರದರ್ಶನ ನೀಡಲು ಮುಂದಾಗಿದೆ. ಫೆಬ್ರವರಿ.27ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನವನ್ನು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಿ ಆಚರಿಸಲು ನಿರ್ಧರಿಸಲಾಗಿದೆ.
ಇಂದು ಬಿವೈ ವಿಜಯೇಂದ್ರ ಅವರನ್ನು ಬೆಂಬಲಿಸುವಂತ ಬಣವೊಂದು ಸಭೆಯನ್ನು ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಸಭೆಯ ಬಳಿಕ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರು ಮಾಹಿತಿ ನೀಡಿದ್ದೂ, ಫೆಬ್ರವರಿ 27ರಂದು ದಾವಣಗೆರೆಯಲ್ಲಿ ಬಿಎಸ್ ಯಡಿಯೂರಪ್ಪ ಜನ್ಮದಿನ ಆಚರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಈ ಸಭೆಯ ವೇಳೆಯಲ್ಲಿ ಹತ್ತು ಜನರ ಒಂದು ಸಮಿತಿ ಮಾಡಲಾಗಿದೆ. ಈ ಸಮಿತಿ ರಾಜ್ಯಾಧ್ಯಂತ ಪ್ರವಾಸ ಮಾಡಲಿದೆ ಎಂಬುದಾಗಿ ಮಾಜಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ಅಲ್ಲದೇ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
BREAKING: ಮಂಡ್ಯದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಭಾರೀ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ