ರಾಯಚೂರು: ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಬಿ.ವೈ ವಿಜಯೇಂದ್ರ ಮುಂದಿನ ಸಿಎಂ ಎಂಬುದಾಗಿ ಸ್ವಾಗತ ಮಾಡುತ್ತಲೇ, ಹೇಳಿದಂತ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಿನ್ನೆ ರಾಯಚೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿಯೂ ಭಾಗಿಯಾಗಿದ್ದರು. ಈ ವೇಳೆ ಅವರನ್ನು ಶಾಸಕ ಶಿವರಾಜ್ ಪಾಟೀಲ್ ಮುಂದಿನ ಮುಖ್ಯಮಂತ್ರಿ ಬಿವೈ ವಿಜಯೇಂದ್ರ ಎಂಬುದಾಗಿಯೇ ಸ್ವಾಗತಿಸಿದ್ದರು.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಶಿವರಾಜ್ ಪಾಟೀಲ್ ಹೇಳಿದಂತ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಂತೆ ಪರ ವಿರೋಧದ ಚರ್ಚೆಗಳು ಕೂಡ ನಡೆಯುತ್ತಿವೆ.
ಒಟ್ಟಾರೆಯಾಗಿ ವಿಧಾನಸಭಾ ಚುನಾವಣೆ ಇನ್ನೂ ಐದು ವರ್ಷ ಇರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮುಂದಿನ ಸಿಎಂ ಎಂಬ ವಿಚಾರ ಬಿಜೆಪಿಯಲ್ಲಿ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಮೂಲಕ ಈಗಲೇ ಸದ್ದು ಮಾಡುತ್ತಿದೆ.
‘ರೈತ’ರಿಗೆ ಗುಡ್ ನ್ಯೂಸ್: ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಉಪಕರಣ’ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut