ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿರುವಂತ ಸಿಎಂ ಇಬ್ರಾಹಿಂ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಇದೀಗ ಚುನಾವಣೆ ಘೋಷಣೆ ಮಾಡಲಾಗಿದೆ. ಆಗಸ್ಟ್ 11ರಂದು ಮತದಾನ ನಡೆದು, ಅಂದೇ ಸಂಜೆ ಮತಏಣಿಕೆಯ ಬಳಿಕ ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಿದ್ದು, ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಮಾರ್ಚ್ 31, 2022ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅವಧಿ ಜೂನ್ 17, 2024ರವರೆಗೆ ಇತ್ತು ಎಂದು ತಿಳಿಸಿದೆ.
ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವಂತ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಜುಲೈ. 25ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ದಿನಾಂಕ 01-08-2022 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
BIGG NEWS: ‘ಕಾಂಗ್ರೆಸ್ ಶಾಸಕ’ನಿಗೆ ‘ಕೇಸರಿ ಶಾಲು’ ಹಾಕಿದ ‘ಬಿಜೆಪಿ ಶಾಸಕ’ರು.!
ನಾಮಪತ್ರಗಳ ಪರಿಶೀಲನೆ ದಿನಾಂಕ 02-08-2022ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ದಿನಾಂಕ 04-08-2022 ಆಗಿದೆ. ದಿನಾಂಕ 11-08-2022ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಈ ಬಳಿಕ ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.
ವರದಿ : ವಸಂತ ಬಿ ಈಶ್ವರಗೆರೆ