ಮುಂಬೈ: ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರದ ಹೈವೋಲ್ಟೇಜ್ ಕ್ಷೇತ್ರವಾದ ಬಾರಾಮತಿಯಲ್ಲಿ ಸುನೇತ್ರಾ ಪವಾರ್ ಐತಿಹಾಸಿಕ ಜಯ ದಾಖಲಿಸಿದ್ದಾರೆ. ಒಟ್ಟಾರೆ ಫಲಿತಾಂಶದಲ್ಲಿ ಬಿಜೆಪಿ 4 ಸ್ಥಾನಗಳನ್ನು ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದ್ದರೆ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ.
ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದಿಂದ ತೆರವಾಗಿದ್ದ ಬಾರಾಮತಿ ಕ್ಷೇತ್ರದಲ್ಲಿ ಅವರ ಪತ್ನಿ ಸುನೇತ್ರಾ ಪವಾರ್ (NCP-ಅಜಿತ್ ಬಣ) ಅವರು 2.18 ಲಕ್ಷಕ್ಕೂ ಅಧಿಕ ಮತಗಳ ಬೃಹತ್ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಮೂಲಕ ಅವರು ತಮ್ಮ ಪತಿಯ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಬಿಜೆಪಿ ಗುಜರಾತ್‌ನ ಉಮ್ರೆತ್, ತ್ರಿಪುರಾದ ಧರ್ಮನಗರ, ನಾಗಾಲ್ಯಾಂಡ್‌ನ ಕೊರಿಡಾಂಗ್ ಮತ್ತು ಮಹಾರಾಷ್ಟ್ರದ ರಾಹುರಿ ಕ್ಷೇತ್ರದಲ್ಲಿ ಜಯಗಳಿಸಿದೆ.ಕರ್ನಾಟಕದ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಅವರು ಭರ್ಜರಿ ಜಯ ದಾಖಲಿಸಿ ತಮ್ಮ ತಂದೆಯ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಅಲ್ಲದೆ ದಾವಣಗೆರೆ ದಕ್ಷಿಣದಲ್ಲೂ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.








