ಹುಬ್ಬಳ್ಳಿ : ಇದೇ ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿಯಲ್ಲಿ
ಉಪಚುನಾವಣೆ ನಡೆಯಲಿದ್ದು, ಈ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಉಪಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ. ಈಗಾಗಲೇ ಸಂಡೂರು ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಮೂರೂ ಕ್ಷೇತ್ರಗಳಲ್ಲೂ ಒಳ್ಳೆಯ ವಾತಾವರಣ ಇದೆ.ಶಿಗ್ಗಾವಿಯಲ್ಲಿ ಕಾರ್ಯಕರ್ತರ ಜೊತೆಗೆ ನಾನು ಚರ್ಚೆ ಮಾಡಿದ್ದೇನೆ.ಬಸವರಾಜ್ ಬೊಮ್ಮಾಯಿ ವಿರುದ್ಧ ಜನಾಕ್ರೋಶ ಇದೆ ಅಂತೆ ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತೇನೆ ಎಂದು ಕೊಟ್ಟಿಲ್ಲವಂತೆ ಹೀಗಾಗಿ ನಾವೇ ಶಿಗ್ಗಾವಿ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಹಲೋ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿ ಎ ನೌಕರ ಸೂಸೈಡ್ ಮಾಡಿಕೊಂಡಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಆಪ್ತರಾಗಲಿ ಯಾರೇ ಆಗಲಿ ನಿರ್ದಾಕ್ಷಿಣ್ಯ ಕ್ರಮವಾಗುತ್ತದೆ. ಚುನಾವಣಾ ಸಮಯದಲ್ಲಿ ಈ ರೀತಿಯ ಆರೋಪ ಇರುವುದೇ. ಕೆಲವರು ಚುನಾವಣಾ ಸಂದರ್ಭದಲ್ಲಿ ಇಂತಹದನ್ನು ತರುತ್ತಾರೆ.ಕಾನೂನಿನ ಪ್ರಕಾರ ತನಿಖೆ ಆಗುತ್ತದೆ ಎಂದು ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.