ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಸಿ.ಪಿ ಯೋಗೇಶ್ವರ್ ಗೆ ಕೈತಪ್ಪೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
ಈ ಸಂಬಂಧ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಎಸ್ ನಿರ್ಮಲಾ ಅವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಸಿ.ಪಿ ಯೋಗೇಶ್ವರ್ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು ಎಂದಿದ್ದಾರೆ.
ವಿಧಾನಪರಿಷತ್ತಿನ ಸದಸ್ಯತ್ವಕ್ಕೆ ಸಿ.ಪಿ ಯೋಗೇಶ್ವರ್ ನೀಡಿದ್ದಂತ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ದಿನಾಂಕ 21-10-2024ದು ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ನಿಯಮ 185(2)ರ ಮೇರೆಗೆ ಅಂಗೀಕರಿಸಿರುತ್ತಾರೆ ಎಂದು ತಿಳಿಸಿದ್ದಾರೆ.
BIG NEWS: ಮೀಸಲು ಅರಣ್ಯ ಒತ್ತುವರಿ ದೂರು: ಈ ಸ್ಪಷ್ಟನೆ ಕೊಟ್ಟ ಸಚಿವ ಎನ್.ಎಸ್ ಬೋಸರಾಜು
ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?