ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 8 ನೇ ವೇತನ ಆಯೋಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಪ್ರಕಟಿಸಿದ್ದಾರೆ.
8 ನೇ ವೇತನ ಆಯೋಗದ ಅನುಷ್ಠಾನವು ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಕಾರಣವಾಗುವ ನಿರೀಕ್ಷೆಯಿದೆ. ಆ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಂತೆ ಆಗಿದೆ.
2025 ರ ಬಜೆಟ್ ಘೋಷಣೆಗಳಿಗೆ ಕೆಲವು ದಿನಗಳ ಮೊದಲು ಕೇಂದ್ರ ಸಚಿವ ಸಂಪುಟವು 8 ನೇ ವೇತನ ಆಯೋಗದ ಅನುಮೋದನೆಯನ್ನು ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ 8 ನೇ ವೇತನ ಆಯೋಗವನ್ನು ಕ್ಯಾಬಿನೆಟ್ ಅನುಮೋದಿಸಿದೆ ಎಂದು ಅಶ್ವಿನಿ ವೈಷ್ಣವ್ ದೃಢಪಡಿಸಿದ್ದರೂ, ಅದರ ಅನುಷ್ಠಾನದ ನಿಖರವಾದ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ.
#WATCH | Delhi: Union Minister Ashwini Vaishnaw says, "Prime Minister has approved the 8th Central Pay Commission for all employees of Central Government…" pic.twitter.com/lrVUD25hFu
— ANI (@ANI) January 16, 2025
BREAKING: ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: 8ನೇ ವೇತನ ಆಯೋಗಕ್ಕೆ ಕೇಂದ್ರ ಸರ್ಕಾರ ಅನುಮೋದನೆ
2024-25ನೇ ಸಾಲಿನ ‘GDP’ ಬೆಳವಣಿಗೆ ದರ ಶೇ.6.4ಕ್ಕೆ ಏರಿಕೆ : ‘FICCI’ ಆರ್ಥಿಕ ಮುನ್ನೋಟ ಸಮೀಕ್ಷೆ