ಬೆಂಗಳೂರು: ಮಂಗಳೂರಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಂಯಲ್ಲಿ ಅಭಿವೃದ್ಧಿ ಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ದೇರೆಬೈಲ್‌ನ ಬ್ಲೂಬರ‍್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇ ರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರ ಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರು ಕಳೆದ ತಿಂಗಳು 24ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡಲು ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
CRIME NEWS: ವಿಜಯಪುರದಲ್ಲಿ SBI ಬ್ಯಾಂಕ್ ದರೋಡೆ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್
BREAKING: 2,000 ಲಂಚ ಸ್ವೀಕರಿಸುವಾಗ ಉಪ ತಹಶೀಲ್ದಾರ್, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ