ಬೆಂಗಳೂರು: ರಾಜ್ಯದಲ್ಲಿರುವ ಒಟ್ಟು 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್ (Pre-school Education Kit) ಒದಗಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು, “ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ (ICDS) ಈ ಶಾಲಾಪೂರ್ವ ಶಿಕ್ಷಣ ಕಿಟ್ಗಳನ್ನು ವಿತರಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು.
ರಾಜ್ಯದ ಒಟ್ಟು 69,922 ಅಂಗನವಾಡಿ ಕೇಂದ್ರಗಳಿಗೆ ಈ ಕಿಟ್ಗಳು ತಲುಪಲಿವೆ. ಪ್ರತಿ ಅಂಗನವಾಡಿ ಕೇಂದ್ರಕ್ಕೆ ತಲಾ ₹3,000 ವೆಚ್ಚದ ಕಿಟ್ ನೀಡಲಾಗುತ್ತದೆ. ಈ ಯೋಜನೆಗಾಗಿ ಸರ್ಕಾರ ಒಟ್ಟು ₹20.98 ಕೋಟಿ ವೆಚ್ಚ ಮಾಡಲು ತೀರ್ಮಾನಿಸಿದೆ.ಈ ಶಾಲಾಪೂರ್ವ ಶಿಕ್ಷಣ ಕಿಟ್ಗಳು ಅಂಗನವಾಡಿ ಮಕ್ಕಳ ಉನ್ನತ ಅಭ್ಯಾಸ ಹಾಗೂ ಉತ್ತಮ ಕಲಿಕೆಗೆ ಕಲಿಕಾ ಪೂರಕವಾಗಿ ನೆರವಾಗಲಿವೆ,” ಎಂದು ಸಚಿವ ಎಚ್.ಕೆ. ಪಾಟೀಲ್ ಅವರು ಆಶಯ ವ್ಯಕ್ತಪಡಿಸಿದ್ದಾರೆ.








