ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೀಗಾಗಿ ಬೆಂಗಳೂರಲ್ಲಿ 2ನೇ ಹಂತದ ಮೆಟ್ರೋದ ನಂತ್ರ, 3ನೇ ಹಂತದ ಕಾಮಗಾರಿಯೂ ಆರಂಭಗೊಳ್ಳಲಿದೆ.
ಈ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಬಹು ನಿರೀಕ್ಷಿತ ₹15,611 ಕೋಟಿ ವೆಚ್ಚದ ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-3ರ ಎರಡು ಪಥಗಳ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ನಾನು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಕೇಂದ್ರ ಸರಕಾರವು ಬೆಂಗಳೂರು ನಗರದ ಜನತೆಗೆ ನೀಡಿರುವ ವರ ಮಹಾಲಕ್ಷ್ಮೀ ಹಬ್ಬದ ಉಡುಗೊರೆ ಎಂದೇ ನಾನು ಭಾವಿಸಿದ್ದೇನೆ. ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಉತ್ತೇಜನ ನೀಡುತ್ತಿರುವ ಮಾನ್ಯ ಪ್ರಧಾನಿಗಳಿಗೆ ನನ್ನ ಧನ್ಯವಾದಗಳನ್ನು ತಿಳಿಸಿದ್ದಾರೆ.
ಬಹು ನಿರೀಕ್ಷಿತ ₹15,611 ಕೋಟಿ ವೆಚ್ಚದ ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-3ರ ಎರಡು ಪಥಗಳ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ನಾನು ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರನ್ನು ಅಭಿನಂದಿಸುತ್ತೇನೆ.
ಕೇಂದ್ರ ಸರಕಾರವು ಬೆಂಗಳೂರು ನಗರದ ಜನತೆಗೆ ನೀಡಿರುವ ವರ ಮಹಾಲಕ್ಷ್ಮೀ ಹಬ್ಬದ ಉಡುಗೊರೆ ಎಂದೇ… pic.twitter.com/mLd89uFMwH
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 16, 2024
BREAKING: ರಾಜ್ಯ ಸರ್ಕಾರದಿಂದ SBI, PNB ಬ್ಯಾಂಕ್ ಖಾತೆ ಸ್ಥಗಿತಕ್ಕೆ ‘ತಾತ್ಕಾಲಿಕ ತಡೆ’ ನೀಡಿ ಆದೇಶ
BREAKING: ‘SBI, PNB ಬ್ಯಾಂಕ್’ನ ಎಲ್ಲಾ ವ್ಯವಹಾರಗಳನ್ನು 15 ದಿನ ತಡೆಹಿಡಿಯುವಂತೆ ‘ರಾಜ್ಯ ಸರ್ಕಾರ’ ಆದೇಶ
ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭ | South Western Railway