ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ವಿಭಾಗದ ಮೂಲಕ ಚಾಮರಾಜನಗರ ತಾಲ್ಲೂಕಿನ 166 ಗ್ರಾಮಗಳು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 163 ಗ್ರಾಮಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ 95 ಗ್ರಾಮಗಳಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಮನೆ ಮನೆಗೆ ನೀರು ಪೂರೈಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಚಾಮರಾಜನಗರ ತಾಲ್ಲೂಕಿನ 166 ತಾಲ್ಲೂಕುಗಳ ಯೋಜನೆಗೆ 33.04 ಕೋಟಿ ರೂ., ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ 131 ಗ್ರಾಮಗಳು ಹಾಗೂ ಮತ್ತು ಮಾರ್ಗ ಮಧ್ಯದ 32 ಗ್ರಾಮಗಳ ಯೋಜನೆಗೆ 27.38 ಕೋಟಿ ರೂ., ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸರವಾಡಿ ಹಾಗೂ ಇತರ 95 ಗ್ರಾಮಗಳ ಯೋಜನೆಗೆ 16.70 ಕೋಟಿ ರೂ ವೆಚ್ಚದಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದೆಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರಿಗೆ ಸಿಹಿಸುದ್ದಿ: KSRTC ಪ್ರತಿಷ್ಠಿತ ಬಸ್ಸುಗಳ ದರದಲ್ಲಿ ಭಾರೀ ರಿಯಾಯಿತಿ
BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು








