ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಮಾಡಿ, ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಮೂರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಊರಾಗಿರುವ ಧಾರವಾಡ, ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ. ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ನಾಡಿಗೆ ಅಪಾರ ಕೊಡುಗೆ ನೀಡಿರುವ ಧಾರವಾಡವನ್ನು ಮಹಾನಗರ ಪಾಲಿಕೆಯಾಗಿಸಿ, ಆ ಮೂಲಕ ನಗರದ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಮೂರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಊರಾಗಿರುವ ಧಾರವಾಡ, ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ. ಸಾಂಸ್ಕೃತಿಕವಾಗಿ,… pic.twitter.com/sBOd3ZuFc2
— DIPR Karnataka (@KarnatakaVarthe) January 2, 2025
ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳಿದ ಛಲವಾದಿ ನಾರಾಯಣಸ್ವಾಮಿಗೆ ಈ ತಿರುಗೇಟು ಕೊಟ್ಟ ರಮೇಶ್ ಬಾಬು
ಬಾಹ್ಯಾಕಾಶದಿಂದ ಸ್ಮಾರ್ಟ್ ಫೋನ್ ಮೂಲಕ ‘ಧ್ವನಿ ಕರೆ’ ಸಕ್ರಿಯಕ್ಕೆ ಇಸ್ರೋದಿಂದ ‘ಯುಎಸ್ ಉಪಗ್ರಹ’ ಉಡಾವಣೆ
ಇಲ್ಲಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting