ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯಗಳ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಇಂದಿರಾ ಆಹಾರ ಕಿಟ್ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್ ನೀಡಲು ನಿರ್ಧರಿಸಲಾಗಿದೆ.
ಈ ಹಿನ್ನಲೆಯಲ್ಲಿ ಇನ್ಮುಂದೆ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್‌ನಲ್ಲಿ ನೀಡಲಾಗುತ್ತದೆ. ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಎಂದು ತಿಳಿಸಿದ್ದಾರೆ.
ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ