ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉಚಿತ ವಿದ್ಯುತ್, ನೀರಿನ ಸೌಲಭ್ಯ ಒದಿಗಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಡಿ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1234 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಯೋಜನೆಯನ್ನು ರೂ.29.19 ಕೋಟಿ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು (ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರೂ.25.85 ಕೋಟಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರೂ.3.34 ಕೋಟಿ) ಸಚಿವ ಸಂಪುಟ ನಿರ್ಧರಿಸಿದೆ.
6.ರಾಜ್ಯದ 8 ಜಿಲ್ಲೆಗಳಲ್ಲಿನ 201 KRIES ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೋಟರಿ ಇಂಟರ್‍ನ್ಯಾಷನಲ್ ಬೆಂಗಳೂರು ಇವರ ಸಹಭಾಗಿತ್ವದೊಂದಿಗೆ ಒಟ್ಟು ವೆಚ್ಚ ರೂ.2.37 ಕೋಟಿಗಳಲ್ಲಿ ರೋಟರಿ ಇಂಟರ್‍ನ್ಯಾಷನಲ್ ಸಂಸ್ಥೆ ವತಿಯಿಂದ ರೂ.1.87 ಕೋಟಿಗಳನ್ನು ಮತ್ತು KRIES ಸಂಸ್ಥೆ ವತಿಯಿಂದ ರೂ.49.89 ಲಕ್ಷಗಳನ್ನು ಭರಿಸುವ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.