Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರ ‘ಟಿ20 ವಿಶ್ವಕಪ್’ನಿಂದ ನಿರ್ಗಮಿಸಿದ ಪಾಕ್ ಆಟಗಾರರಿಗೆ ಬಿಗ್ ಶಾಕ್ ; 16 ಲಕ್ಷ ದಂಡ ವಿಧಿಸಿದ ‘PCB’

02/03/2026 5:16 PM

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

02/03/2026 5:15 PM

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ
KARNATAKA

BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

By kannadanewsnow0912/06/2025 4:57 PM

ಬೆಂಗಳೂರು: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯ ಮೇಲೆ ಇಂದು ಅಂತಿಮವಾಗಿ ಚರ್ಚೆ ಮಾಡಲು ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ಇಂದು ಒಂದೇ ವಿಷಯದ ಮೇಲೆ ಚರ್ಚೆ ಮಾಡಲಾಗಿದೆ ಎಂದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು 54 ಮಾನದಂಡಗಳನ್ನು ಇಟ್ಟುಕೊಂಡು ಕೈಗೊಂಡು ಮನೆ ಮನೆಗೆ ಭೇಟಿ ನೀಡಿ ಸಲ್ಲಿಸಿರುವ ವರದಿಯಾಗಿದೆ. 2011 ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.11 ಕೋಟಿ ಜನರಿದ್ದರು. ಈ ಜನಸಂಖ್ಯೆ 2015 ರ ವೇಳೆಗೆ 6.35 ಕೋಟಿ ಎಂದು ಅಂದಾಜಿಸಲಾಗಿದೆ. 5.98 ಕೋಟಿ ಜನರು ಸಮೀಕ್ಷೆಗೆ ಒಳಪಟ್ಟಿದ್ದಾರೆ. ಸಮೀಕ್ಷೆ ಪ್ರಾರಂಭವಾಗಿದ್ದು 11.4.2015 ರಂದು ಹಾಗೂ 30-5-2015 ರಂದು ಮುಕ್ತಾಯವಾಗಿದೆ. 1.60 ಲಕ್ಷ ಸಿಬ್ಬಂದಿ ಹಾಗೂ 1.33 ಲಕ್ಷ ಉಪಾಧ್ಯಾಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಹೆಚ್.ಡಿ.ಕುಮಾರಸ್ವಾಮಿಯವರು ವರದಿ ಪಡೆಯಲಿಲ್ಲ

ಹಿಂದೆ 2013-2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವರದಿ ಮತ್ತು ಅದರ ಶಿಫಾರಸ್ಸುಗಳು ಅಂತಿಮಗೊಂಡಿರಲಿಲ್ಲ. 2018 ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾದರು. ಪುಟ್ಟರಂಗಶೆಟ್ಟರು ಅವರು ಹಿಂದುಳಿದ ವರ್ಗಗಳ ಸಚಿವರಾದರು. ಆ ವೇಳೆಗೆ ವರದಿ ಪೂರ್ಣಗೊಂಡಿತ್ತು. ಅಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜು ಹಾಗೂ ಸದಸ್ಯರು ಸಚಿವ ಪುಟ್ಟರಂಗಶೆಟ್ಟರನ್ನು ಭೇಟಿ ಮಾಡಿ ವರದಿ ಪಡೆಯಬೇಕು ಎಂದು ಕೋರಿದಾಗ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಒತ್ತಡ ಹಾಕಿ ವರದಿಯನ್ನು ಪಡೆಯಬಾರದು ಎಂದದ್ದರಿಂದ ಅವರು ವರದಿ ಪಡೆಯಲಿಲ್ಲ. ಕಾಂತರಾಜು ಅವರ ಅವಧಿ ಮುಗಿದ ನಂತರ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿತು. ಸದಸ್ಯರೂ ಕೂಡ ಬಿಜೆಪಿಯವರೇ ಆಗಿದ್ದರು. ಜಯಪ್ರಕಾಶ್ ಹೆಗಡೆಯವರು ಸಮೀಕ್ಷೆಯ ದತ್ತಾಂಶಗಳ ಆಧಾರದ ಮೇಲೆ ಶಿಫಾರಸ್ಸು ಮಾಡಿದರು. ಶಿಫಾರಸ್ಸುಗಳನ್ನು 29-2-2024 ರಂದು ಸರ್ಕಾರಕ್ಕೆ ಸಲ್ಲಿಸಿದರು. ಕಾಂತರಾಜು ಅವರು ಕೂಡ ಈ ಸಂದರ್ಭದಲ್ಲಿ ಇದ್ದರು ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಬಂದಿದ್ದರಿಂದ ವರದಿಯ ಬಗ್ಗೆ ಚರ್ಚೆ ಮಾಡಲಾಗಲಿಲ್ಲ. ನಂತರ ನಮ್ಮ ಸರ್ಕಾರ ವರದಿಯನ್ನು ಪಡೆದು 2025 ರಲ್ಲಿ ಸಚಿವ ಸಂಪುಟದಲ್ಲಿ ಮಂಡಿಸಲಾಗಿದೆ. ಸಚಿವ ಸಂಪುಟದಲ್ಲಿ ಮಂತ್ರಿ ಮಂಡಲದ ಸದಸ್ಯರು ಅಭಿಪ್ರಾಯಗಳನ್ನು ನೀಡಿದ್ದಾರೆ. ಅಂತಿಮವಾಗಿ ಇಂದು ವರದಿಯ ಬಗ್ಗೆ ಚರ್ಚೆ ಮಾಡಿದೆ ಎಂದರು.

ಪಕ್ಷದ ವರಿಷ್ಠರ ಸಲಹೆ

ಪಕ್ಷದ ವರಿಷ್ಠರು ನನ್ನನ್ನು ಮತ್ತು ಉಪಮುಖ್ಯಮಂತ್ರಿಗಳನ್ನು ಕರೆದು ವರದಿ ಹತ್ತು ವರ್ಷಗಳಷ್ಟು ಹಳೆಯದಾಗಿದ್ದು, ಕಾನೂನು ಪ್ರಕಾರ ಅನೇಕ ಬದಲಾವಣೆಗಳು ಮತ್ತು ಬೆಳವಣಿಗೆಗಳು ಆಗಿರುತ್ತವೆ ಎಂದು ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತಿದ್ದುಪಡಿ ವಿಧೇಯಕ (2014) ಸೆಕ್ಷನ್ 11 ಕಲಂ (1) ರಂತೆ ರಾಜ್ಯ ಸರ್ಕಾರವು ಯಾವುದೇ ಸಮಯದಲ್ಲಿ ಈ ಅಧಿನಿಯಮ ಜಾರಿಗೆ ಬಂದ ದಿನಾಂಕದಿಂದ 10 ವರ್ಷಗಳ ಅವಧಿ ಮುಕ್ತಾಯವಾದಾಗ, ಮತ್ತು ಅದರ ನಂತರ ಬರುವ ಪ್ರತಿ 10 ವರ್ಷಗಳು ಮುಕ್ತಾಯವಾಗುವಾಗ ಹಿಂದುಳಿದ ವರ್ಗವಾಗಿ ಉಳಿಯದೇ ಹೋಗಿರುವ ವರ್ಗಗಳನ್ನು ಪಟ್ಟಿಯನ್ನು ತೆಗೆದುಹಾಕುವುದು ಅಥವಾ ಹೊಸ ಹಿಂದುಳಿದ ವರ್ಗಗಳನ್ನು ಪಟ್ಟಿಗೆ ಸೇರಿಸುವದು ಎಂದು ಸ್ಪಷ್ಟವಾಗಿದೆ ಹೇಳಿದೆ. ಕಲಂ 2 ರಲ್ಲಿ ಹೇಳಿದಂತೆ ಆಯೋಗದ ಅಧ್ಯಕ್ಷರಾದ ಮಧುಸೂದನ ನಾಯಕ್ ಅವರ ಸಲಹೆಯನ್ನೂ ಪಡೆಯಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಬಗ್ಗೆ ಸುದ್ದಿಗಾರರು ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಕಾಯ್ದೆಯ ಸೆಕ್ಷನ್ 11 ರಂತೆ ಹತ್ತು ವರ್ಷಗಳ ನಂತರ ಸಮೀಕ್ಷೆಯ ವರದಿ ಮಾನ್ಯವಾಗುವುದಿಲ್ಲ. ಜನಸಂಖ್ಯೆ, ಶೈಕ್ಷಣಿಕ ಸಾಮಾಜಿಕ ಬೆಳವಣಿಗೆಗಳು ಆಗಿರುತ್ತವೆ ಎಂದರು.

ಪ್ರಣಾಳಿಕೆಯಲ್ಲಿ ವರದಿ ಜಾರಿ ಮಾಡುವ ಬಗ್ಗೆ ಆಶ್ವಾಸನೆ ನೀಡಲಾಗಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸಾಮಾಜಿಕ ಪರಿಸ್ಥಿತಿಗಳು ಬದಲಾಗಿರುವ ಹಿನ್ನಲೆಯಲ್ಲಿ ಹಾಗೂ ಪಕ್ಷದ ವರಿಷ್ಠರೂ ಮಾರ್ಗದರ್ಶನ ಮಾಡಿದ್ದು, ಇಂದಿನ ಸಚಿವ ಸಂಪುಟದಲ್ಲಿ ಮರುಸಮೀಕ್ಷೆಗೆ ತೀರ್ಮಾನಿಸಲಾಗಿದೆ ಎಂದರು.

ನಿವೃತ್ತ ಅಡ್ವೊಕೇಟ್ ಜನರಲ್ ಮಧುಸೂದನ ನಾಯಕ್ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಇನ್ನೂ ಸದಸ್ಯರುಗಳ ನೇಮಕ ಆಗಬೇಕಿದೆ. ಸಮೀಕ್ಷೆ ಕುರಿತು ಚರ್ಚಿಸಲು ಅವರನ್ನು ಸಂಪರ್ಕಿಸಲಾಗುತ್ತದೆ ಎಂದು ಹೇಳಿದರು.

ಆಯೋಗದ ಸಲಹೆ ಪಡೆಯಲಾಗುವುದು

ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ- 1995ರ ಸೆಕ್ಷನ್ 9 (2) ರಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ, ಸಮಸ್ಯೆಗಳ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಹೇಳಿದೆ. ತಿದ್ದುಪಡಿ ಆಗಿರುವುದು 2014ರಲ್ಲಿ. ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಮೇಲ್ವಿಚಾರಣೆ ಮಾಡಬೇಕು ಎಂದು ಸೆಕ್ಷನ್ (3) ರಲ್ಲಿ ಹೇಳಿದೆ. ಸೆಕ್ಷನ್ 9 (1)ರ ಅನ್ವಯ ಅರ್ಜಿಗಳನ್ನು ಪರಿಶೀಲಿಸಿ ಹಿಂದುಳಿದ ವರ್ಗಗಳಿಗೆ ಸೇರಿಸುವ ಅಥವಾ ತೆಗೆದು ಹಾಕುವ ಅಧಿಕಾರ ಆಯೋಗಕ್ಕೆ ಇರುತ್ತದೆ ಎಂದು ಹೇಳಲಾಗಿದೆ. ಆದ್ದರಿಂದ ಹೊಸದಾಗಿ ಸಮೀಕ್ಷೆ ನಡೆಸುವ ಕುರಿತು ಇಂದು ಸಚಿವ ಸಂಪುಟದ ನಿರ್ಧಾರ ಆಗಿದ್ದು ಮುಂದಿನ ದಿನಗಳಲ್ಲಿ ಆಯೋಗದ ಸಲಹೆಯನ್ನೂ ಪಡೆಯಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾನೂನಿನ ಪ್ರಕಾರ ತೀರ್ಮಾನ

ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆ ಮಾಡಿ ಹತ್ತು ವರ್ಷಗಳು ಕಳೆದಿದೆ. ಹತ್ತು ವರ್ಷಗಳಾದ ನಂತರ ಹೊಸದಾಗಿ ಸಮೀಕ್ಷೆ ನಡೆಸಬೇಕೆಂದು ಸೆಕ್ಷನ್ 11(1) ರಲ್ಲಿ ಹೇಳಲಾಗಿದ್ದು ಅದರ ಪ್ರಕಾರ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಹೇಳಿಲ್ಲ

ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗಿಂತ ಈ ಸಮೀಕ್ಷೆ ಹೇಗೆ ಭಿನ್ನವಾಗಿ ಇರುತ್ತದೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವೂ ಎಲ್ಲಿಯೂ ಕೂಡಾ ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಹೇಳಿಲ್ಲ. ನಾವು ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವಿರಾ ಎಂದು ಕೇಳಿದಾಗಲೂ ಉತ್ತರ ಕೊಡಲಿಲ್ಲ. ಹಾಗಾಗಿ ನಾವು ಮಾಡುತ್ತಿದ್ದೇವೆ. ಸಮಾಜೋ-ಶೈಕ್ಷಣಿಕ ಸಮೀಕ್ಷೆ ವರದಿ ಅನ್ವಯ ಸಾಮಾಜಿಕ ನ್ಯಾಯ ನೀಡಲು ಬದ್ಧವಾಗಿದೆ ಎಂದು ಹೇಳಿದರು. ಸಮೀಕ್ಷೆಯನ್ನು 90 ದಿನಗಳ ಒಳಗೆ ಮಾಡಲು ಆಯೋಗವನ್ನು ಕೋರುತ್ತೇವೆ. ತೆಲಂಗಾಣದಲ್ಲಿ 70 ದಿನಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ.

ಹತ್ತು ವರ್ಷಗಳಲ್ಲಿ ಬದಲಾವಣೆಯಾಗುತ್ತದೆ

ಹತ್ತು ವರ್ಷಗಳಲ್ಲಿ ಜನಸಂಖ್ಯೆ ಹೆಚ್ಚಾಗಿರುತ್ತದೆ. ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಬದಲಾವಣೆಗಳೂ ಆಗಿರುತ್ತವೆ. ಆದ್ದರಿಂದ ಹತ್ತು ವರ್ಷಗಳ ನಂತರ ಸಮೀಕ್ಷೆ ನಡೆಸಬೇಕೆಂದು ಅಧಿನಿಯಮದಲ್ಲಿ ಹೇಳಿದೆ. ಅದರಂತೆ ಮಾಡುತ್ತಿದ್ದೇವೆ. ಈ ಕುರಿತು ಹೈಕಮಾಂಡ್ ಸಲಹೆ ನೀಡಿತ್ತು ಅಷ್ಟೇ. ನಾವು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಈ ಹಿಂದಿನ ಸಮೀಕ್ಷೆ ಕುರಿತು ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಗಳಿಂದ ಆಕ್ಷೇಪಣೆ ಇತ್ತು. ಈ ಸಮೀಕ್ಷೆಯಲ್ಲಿ ಆ ಸಮುದಾಯಗಳಿಗೆ ಯಾವ ರೀತಿ ಭರವಸೆ ನೀಡಿರುವಿರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸೆಕ್ಷನ್ 11 ರಂತೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.

Gujarat Plane Crash: ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿ ಬಿಡುಗಡೆ

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

02/03/2026 5:15 PM1 Min Read

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM2 Mins Read

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM2 Mins Read
Recent News

BREAKING : 2026ರ ‘ಟಿ20 ವಿಶ್ವಕಪ್’ನಿಂದ ನಿರ್ಗಮಿಸಿದ ಪಾಕ್ ಆಟಗಾರರಿಗೆ ಬಿಗ್ ಶಾಕ್ ; 16 ಲಕ್ಷ ದಂಡ ವಿಧಿಸಿದ ‘PCB’

02/03/2026 5:16 PM

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

02/03/2026 5:15 PM

BREAKING : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್’ಗೆ ಡ್ರೋನ್ ಬೋಟ್ ಡಿಕ್ಕಿ ; ಭಾರತೀಯ ಸಿಬ್ಬಂದಿ ಸಾವು

02/03/2026 4:43 PM

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

02/03/2026 4:02 PM
State News
KARNATAKA

BREAKING: ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನಟಿ ಅಮೂಲ್ಯ ಪತಿ ಜಗದೀಶ್ ಚಂದ್ರ ನೇಮಕ

By kannadanewsnow0902/03/2026 5:15 PM KARNATAKA 1 Min Read

ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಾರ್ಟಿಯು ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ…

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.