ಬೆಂಗಳೂರು: ಒಂದೆಡೆ ರಾಜಕೀಯ ಪಕ್ಷಗಳಿಂದ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಭರ್ಜರಿ ತಯಾರಿ ನಡೆಸುತ್ತಿವೆ. ಮತ್ತೊಂದೆಡೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಿಂದ ಇದೀಗ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಆರಂಭಗೊಂಡಿದೆ. ಇಂದು ರಾತ್ರಿ, ಇಲ್ಲವೇ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ಹೈಕಮಾಂಡ್ ( BJP high command ) ಸಂಪುಟ ವಿಸ್ತರಣೆಗೆ ( Karnataka Cabinet Expansion ) ಗ್ರೀನ್ ಸಿಗ್ನಲ್ ಕೊಟ್ಟರೇ, ಕೆಲವೇ ದಿನಗಳಲ್ಲಿ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆಯಾಗಲಿದೆ.

ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ

ಸಿಎಂ ಬಸವರಾದ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕೆಲ ಸಚಿವ ಸ್ಥಾನಗಳ ವಿಸ್ತರಣೆ ಬಾಕಿ ಇದೆ. ಅಲ್ಲದೇ ಅನೇಕ ಆಕಾಂಕ್ಷಿಗಳು ಕೂಡ ತೆರೆ ಮರೆಯಲ್ಲಿ ಸಚಿವ ಸ್ಥಾನಕ್ಕಾಗಿ ಕಸರತ್ತು ಕೂಡ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ರಾತ್ರಿ ಅಥವಾ ನಾಳೆ ಸಿಎಂ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ.

ಗಂಡನ ಚೆಕ್​ ಬೌನ್ಸ್​ ಆದ್ರೆ ಅದಕ್ಕೆ ಹೆಂಡ್ತಿ ಹೊಣೆ ಅಲ್ಲ: ಹೈಕೋರ್ಟ್‌ ಮಹತ್ವದ ಆದೇಶ

ರಾಷ್ಟ್ರ ರಾಜಧಾನಿಗೆ ತೆರಳಲಿರುವಂತ ಸಿಎಂ, ಬಿಜೆಪಿ ಹೈಕಮಾಂಡ್ ಭೇಟಿಯಾಗಿ, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದರೇ ಶೀಘ್ರವೇ ಸಚಿವ ಸ್ಥಾನ ಹಂಚಿಕೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.

ರಾಜ್ಯದಲ್ಲಿ ಇನ್ನೂ ಮೂರು ನಾಲ್ಕು ದಿನ ಮಳೆ: ಆತಂಕದಲ್ಲಿ ರೈತ

Share.
Exit mobile version