ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಕುರಿತು ಬಿಜೆಪಿಯ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.
ಹೌದು, ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಗುರುವಾರ ಇಲ್ಲವೇ ಶುಕ್ರವಾರ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಕೂಡ ಮೂಲಗಳಿಂದ ತಿಳಿದು ಬಂದಿದೆ.
ಇತ್ತೀಚೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದರು.
ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದರು.ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಅವರು ಆದಷ್ಟೂ ಬೇಗನೇ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂಬ ಭರವಸೆ ನೀಡಿದ್ದಾರೆ. ವರಿಷ್ಠರು ನನ್ನನ್ನು ಕರೆಸಿ ಮಾತನಾಡಿದರೆ ಆದಷ್ಟು ಬೇಗನೇ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದರು.