ಶಿವಮೊಗ್ಗ : ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ರಚನೆಯಾದ ಬಳಿಕ ಈವರೆಗೆ ಒಂದು ಬಾರಿಯೂ ಸಂಪುಟ ವಿಸ್ತರಣೆಯೂ ಆಗಿಲ್ಲ, ಪುನಾರಚನೆಯೂ ಆಗಿಲ್ಲ, ಸಂಪುಟ ವಿಸ್ತರಣೆ ಈಗ ಆಗುತ್ತದೆ, ಆಗ ಆಗುತ್ತದೆ ಎಂದು ಕಾದು ಕುಳಿತ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿತ್ತು.

ಇದರ ನಡುವೆ ನವೆಂಬರ್ 29 ರಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ತೀವ್ರ ಕೂತುಹಲಕ್ಕೆ ಕಾರಣವಾಗಿದ್ದು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ನವೆಂಬರ್ 29 ರಂದು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಚಿವಾಕಾಂಕ್ಷಿಗಳ ಒತ್ತಡ, ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ನವೆಂಬರ್ 29 ರಂದು ದೆಹಲಿಗೆ ತೆರಳಲಿದ್ದಾರೆ. ನವೆಂಬರ್ 29 ರಂದು ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳಸಲಿದ್ದು, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

BIG NEWS: ಪಿಎಂ ನರೇಂದ್ರ ಮೋದಿಗೆ ಮತ್ತೆ ‘ಜಾಗತಿಕ ನಾಯಕರ’ ಪಟ್ಟಿಯಲ್ಲಿ ಆಗ್ರಸ್ಥಾನ | Approval Rating

ಚಳಿಗಾಲದಲ್ಲಿ ಹೇರ್ ಡ್ರೈಯರ್ ಆಗಾಗ ಬಳಸುತ್ತೀರಾ? ಇಲ್ಲಿದೆ ಅಪಾಯದ ಮಾಹಿತಿ| Hair Dryer

Share.
Exit mobile version