Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ತುಂಡುಡುಗೆ ಧರಿಸಿದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕೊಂದ ಪಾಪಿ ತಮ್ಮ.!

09/10/2025 10:31 AM

BREAKING: TVK ಮುಖ್ಯಸ್ಥ ನಟ ವಿಜಯ್ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ | Bomb threats

09/10/2025 10:31 AM

SHOCKING : ರಾಜ್ಯದಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದ್ಯಾರ್ಥಿ ಸಜೀವ ದಹನ

09/10/2025 10:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ನಂದಿ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ: ಹೀಗಿದೆ ಸಂಪೂರ್ಣ ಹೈಲೈಟ್ಸ್ | Karnataka Cabinet Meeting
KARNATAKA

ಇಂದು ನಂದಿ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ: ಹೀಗಿದೆ ಸಂಪೂರ್ಣ ಹೈಲೈಟ್ಸ್ | Karnataka Cabinet Meeting

By kannadanewsnow0902/07/2025 6:04 PM

ಚಿಕ್ಕಬಳ್ಳಾಪುರ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಂದಿ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಹೆಸರು ಮರುನಾಮಕರಣಕ್ಕೆ ಅಸ್ತು ಎಂದಿದೆ. ಇದಲ್ಲದೇ ಇತರೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2023ರಲ್ಲಿ ಅಧಿಕಾರಕ್ಕೆ ಬಂದಮೇಲೆ ಒಂದು ತೀರ್ಮಾನ ಮಾಡಿದ್ವು. ರೆವಿನ್ಯೂ ವಲಯಗಳಲ್ಲಿ ಕ್ಯಾಬಿನೆಟ್ ಮಾಡಬೇಕಂತ ತೀರ್ಮಾನ ಮಾಡಿದ್ವು. ಗುಲ್ಬರ್ಗ ವಿಭಾಗದಲ್ಲಿ ಮಾಡಿದ್ದೇವೆ. ಮೈಸೂರಿನ ಚಾಮರಾಜನಗರ ಜಿಲ್ಲೆಯಲ್ಲಿ ಮಾಡಲಾಗಿದೆ. ಬೆಳಗಾವಿ ಡಿವಿಜನ್ ಕ್ಯಾಬಿನೆಟ್ ನ ಬಿಜಾಪುರದಲ್ಲಿ ಮಾಡಬೇಕಂತ ತೀರ್ಮಾನ‌ ಮಾಡಲಾಗಿದೆ. ನಾಳೆ ಚಿಕ್ಕಬಳ್ಳಾಪುರದ ಮಂತ್ರಿಗಳು ವಿದೇಶಕ್ಕೆ ಹೋಗ್ತಿದ್ದಾರೆ. ಅದಕ್ಕೆ ಇವತ್ತೆ ಕ್ಯಾಬಿನೆಟ್ ಮಾಡ್ತಿದ್ದೇವೆ. ನಾನು ಹೋಗೊದಕ್ಕೆ ಅನುಮತಿ ಕೊಟ್ಟಿದ್ದೇನೆ ಎಂದರು.

ಇಂದು ನಂದಿಬೆಟ್ಟದಲ್ಲಿ ಬೆಂಗಳೂರು ರವೆನ್ಯೂ ಡಿವಿಜನ್ ಸಭೆ ನಡೆಸಲಾಯಿತು. ಬೆಂಗಳೂರು ಡಿವಿಜನ್ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಬೇರೆ ಜಿಲ್ಲೆಗಳದ್ದು ತುರ್ತು ಇದ್ರೆ ಚರ್ಚೆ ಮಾಡಲಾಗುತ್ತೆದೆ. 48 ವಿಷಯಗಳನ್ನ ಚರ್ಚೆ ಮಾಡಿದ್ದೇವೆ. ಸುಮಾರು 3400 ಕೋಟಿ ಹಣ ಮಂಜೂರು ಮಾಡಲಾಗಿದೆ. ಬಿಜೆಪಿಯವರು ಪದೇ ಪದೇ ಹೇಳ್ತಾರೆ. ಅದಕ್ಕೆ ಒತ್ತಿ ಒತ್ತಿ ಹೇಳ್ತಿದ್ದೇನೆ. ನಿಮಗೆ ಮನದಟ್ಟು ಆದ್ರೆ ಸಾಕು. ಬೆಂಗಳೂರು ಡಿವಿಜನ್ ಗೆ 2050 ಕೋಟಿ ನೀಡಲಾಗಿದೆ. ಎತ್ತಿನ ಹೊಳೆ ಚರ್ಚೆ ಮಾಡಿದ್ದೇವೆ ಎಂದರು.

ಎತ್ತಿನಹೊಳಿಗೆ ಸಂಬಂಧಿಸಿದಂತೆ ನಾನು ಸಚಿವರು ಮಾತಾಡಿದ್ದೇವೆ. ಎತ್ತಿನ ಹೊಳೆ ಯೋಜನೆಗೆ ಅಂದಾಜು 23,251 ಕೋಟಿ. ಇಲ್ಲಿಯವರೆಗೆ ಖರ್ಚು ಆಗಿರುವ ಹಣ 17 ಸಾವಿರ ಕೋಟಿ ಖರ್ಚಾಗಿದೆ. ಇನ್ನೂ ಆರು ಸಾವಿರ ಕೋಟಿ ಒಳಿದಿದೆ. ಇದು ಮೂಲತಃ ಕುಡಿಯುವ ನೀರಾವರಿ ಯೊಜನೆಯಾಗಿದೆ. ಆದ್ರೆ ಕೆರೆಗಳಿಗೆ 50% ನೀರು ತುಂಬಿಸುತ್ತೇವೆ ಎಂದು ಹೇಳಿದ್ದೇವೆ. ಕುಡಿಯುವ ನೀರು ಕೆರೆ ತುಂಬಿಸೊದಕ್ಕೆ 24.1 ಟಿಎಂಸಿ ನೀರು ಬೇಕಾಗಿದೆ. ಕುಡಿಯುವ ನೀರಿಗೆ 14 ಟಿಎಂಸಿ ಬೇಕಾಗಿದೆ. ಮೊದಲು ಕುಡಿಯುವ ನೀರಿನ ಯೋಜನೆ ಮುಗಿಸುತ್ತೇವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳಲ್ಲಿ ಕುಡಿಯುವ ನೀರನ್ನ ಕೊಡ್ತೀವಿ. ಮುನಿಯಪ್ಪನವರು 24 ಗಂಟೆ ರಾಜಕೀಯ ಯೋಚನೆ ಮಾಡ್ತಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಸ್ಯ ಮಾಡಿದರು.

ಇನ್ನೂ ಎರಡು ವರ್ಷಗಳಲ್ಲಿ ಕುಡಿಯುವ ನೀರಿನ ಯೋಜನೆಯನ್ನ ಮುಗಿಸಿ ಜಿಲ್ಲೆ ತಾಲ್ಲೂಕಿಗೆಲ್ಲಾ ನೀರು ಕೊಡ್ತಿವಿ. ಕುಡಿಯುವ ನೀರಿಗೆ ತೊಂದರೆ ಇಲ್ಲ. ನೀರು ಎಲ್ಲಿದೆ ಕೊಡೊಕೆ ಎಂದು ವಿರೋದ ಮಾಡ್ತಾರೆ. ಈಗಾಗಲೇ 82% ಕೆಲಸ ಮುಗಿದಿದೆ. 9807 ಕೋಟಿ ಹಣ ಖರ್ಚಾಗಿದೆ. ಮದುಗಿರಿ, ಪಾವಗಡ, ಟಿಜಿ ಹಳ್ಳಿ ರಾಮನಗರ ಗೌರಿಬಿದನೂರು ಕೊರಟಗೆರೆ ಯಲ್ಲಿ 96% ಕೆಲಸ ಮುಗಿದಿದೆ ಎಂದರು.

ಎತ್ತಿನಹೊಳೆ ಯೋಜನೆಗೆ ಸುಮಾರು 8000 ಕೋಟಿ ಬೇಕು. ನಮ್ಮಲ್ಲಿ ಆರು ಸಾವಿರ ಕೋಟಿ ಉಳಿದಿದೆ. ಭೂಮಿ ಬೆಲೆಯಿಂದ ನಮಗೆ ಜಾಸ್ತಿಯಾಗಿದೆ. 75 ಲಕ್ಷ ಮನೆಗಳಿಗೆ, 9 ಜಿಲ್ಲೆಗಳಿಗೆ, 75 ಲಕ್ಷ ಜನರಿಗೆ ಕುಡಿಯುವ ನೀರಿನ‌ ಬಗ್ಗೆ ಚರ್ಚೆಯಾಗಿದೆ. ಹಣಕಾಸು ಇಲಾಖೆಯ ಮೂಲಕ ಮುಂದಿನ ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಲಾಗುತ್ತದೆ. ಬೆಂಗಳೂರು ಜಿಲ್ಲೆಗೆ 31 ವಿಷಯಗಳು ಚರ್ಚೆಯಾಗಿದೆ 2550 ಕೋಟಿ ಮಂಜೂರು ಮಾಡಿದ್ದೇವೆ. ಪ್ರತಿ ಜಿಲ್ಲೆಗಳಲ್ಲಿ ಕಾರ್ಮಿಕ ಇಲಾಖೆಯಿಂದ, ಕಾರ್ಮಿಕರ ಮಕ್ಕಳಿಗೆ ರೆಸಿಡೆನ್ಸಿ ಶಾಲೆಗಳನ್ನ ತೆರಯಲು ತೀರ್ಮಾನಿಸಲಾಗಿದೆ. 1125 ಕೋಟಿ ಮಂಜೂರು ಮಾಡುತ್ತಿದ್ದೇವೆ. ರಾಜ್ಯದ 31 ಜಿಲ್ಲೆಗಳಲ್ಲೂ ರೆಸಿಡೆನ್ಸಿ ಶಾಲೆಗಳನ್ನ ತೆರಯಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು ನೀರಾವರಿ ಯೋಜನೆಗಳು ಕೆರೆಗಳನ್ನ ನೀರು ತುಂಬಿಸುವ ವಿಷಯ ಚರ್ಚೆ ಮಾಡಿದ್ದೇವೆ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ಗೆ ವಸತಿ ಸಹಿತ ತರಬೇತಿ ನೀಡಲು ಎರಡು ವಸತಿ ಶಾಲೆಗಳನ್ನ ಪ್ರಾರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. 10 ಕೋಟಿ ವೆಚ್ಚ ಮಾಡಲಾಗುತ್ತದೆ. ಬೆಂಗಳೂರು ಸಿಟಿ ವಿಶ್ವವಿದ್ಯಾಲಯಕ್ಕೆ ಡಾ.‌ಮನಮೋಹನ್ ಸಿಂಗ್ ಹೆಸರಿಡಲು ತೀರ್ಮಾನಿಸಲಾಗಿದೆ ಎಂದರು.

ಹೊಸ ತಾಲ್ಲೂಕಗಳಲ್ಲಿ ಎಲ್ಲೆಲ್ಲಿ ಪಿ ಹೆಚ್ ಸಿ ಆಸ್ಪತ್ರೆ ಇಲ್ಲ ಅಲ್ಲಿ ಸಿಹೆಚ್ ಸಿ , ಕಮ್ಯುನಿಟಿ ಹೆಲ್ತ್ ಸೆಂಟರ್ ಪ್ರಾರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ತೀರ್ಮಾನ ಮಾಡಿದ್ದೇವೆ. ಬಾಗೆಪಲ್ಲಿ ಹೆಸರನ್ನ ಭಾಗ್ಯನಗರ ಎಂದು ನಾಮಕರಣ ಮಾಡಲಾಗಿದೆ. ಪಲ್ಲಿ ಅನ್ನೋದು ತೆಲುಗು ಭಾಷೆ, ನಮ್ಮ ಕಡೆ ಅಲ್ಲಿಗೆ ಪಲ್ಲಿ ಎನ್ನುತ್ತೇವೆ. ಇವತ್ತು ಹೆಚ್ ಕೆ ಪಾಟೀಲ್ ಬ್ರೀಫ್ ಮಾಡ್ತಿದ್ರು. ವಿಶೇಷ ಸಭೆ ಆಗಿರೋದ್ರಿಂದ ನಾವು ಬಂದಿದ್ದೇವೆ. 48 ವಿಷಯಗಳನ್ನ ಚರ್ಚೆ ಮಾಡಿ ತೀರ್ಮಾನ ಮಾಡಲಾಗಿದೆ ಎಂದರು.

ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ

24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡ್ತೀವಿ*

9807ಕೋಟಿಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ 85% ಮಗಿದಿದೆ

*ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು 6000 ಚಿಲ್ಲರೆ ಕೋಟಿ.

ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡ್ತೀವಿ

ಈ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಮುಂದಿನ‌ ಕ್ಯಾಬಿನೆಟ್ ನಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗಿದೆ

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ*

ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ

*ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು

ಬೆಂಗಳೂರು ಕೇಂದ್ರ ವಿವಿಗೆ “ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ” ಎಂದು ಹೆಸರಿಡಲು ತೀರ್ಮಾನ

PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ

*ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲಾಗುವುದು.

ನಂದಿ ಬೆಟ್ಟದಲ್ಲಿ ನಡೆದ ಈ ಸಭೆಯು ಈ ವರ್ಷದ 14 ನೇ ಸಭೆಯಾಗಿದೆ.

ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ.

ಈ ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ.

ಈ ಸಭೆಯಲ್ಲಿ ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಳೆದ ವರ್ಷವೇ ಎತ್ತಿನ ಹೊಳೆಯ ನೀರನ್ನು ಎತ್ತಿನ ಯಶಸ್ವಿಯಾಗಿ ಹರಿಸಲಾಯಿತು.

ಸಭೆಯಲ್ಲಿ ನಾವು ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು. ಇದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು.

ಶಿಕ್ಷಣಕ್ಕೆ- 1627.25 ಕೋಟಿ ರೂ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸುತ್ತಿದ್ದೇವೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ. ನೀರಾವರಿ ಯೋಜನೆಗಳಿಗೆ – 1154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ. ಇದರ ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ

ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ. ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ.

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮೀಕರಣ ಮಾಡಲು ತೀರ್ಮಾನಿಸಿದ್ದೇವೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದ್ಯಾರ್ಥಿ ಸಜೀವ ದಹನ

09/10/2025 10:28 AM1 Min Read

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ ಪ್ರಕರಣ : ಆರೋಪಿಗಳ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

09/10/2025 10:21 AM1 Min Read

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಹೆಣ್ಣು ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ : ಆರೋಪಿ ಅರೆಸ್ಟ್!

09/10/2025 10:07 AM1 Min Read
Recent News

SHOCKING : ತುಂಡುಡುಗೆ ಧರಿಸಿದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕೊಂದ ಪಾಪಿ ತಮ್ಮ.!

09/10/2025 10:31 AM

BREAKING: TVK ಮುಖ್ಯಸ್ಥ ನಟ ವಿಜಯ್ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ | Bomb threats

09/10/2025 10:31 AM

SHOCKING : ರಾಜ್ಯದಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದ್ಯಾರ್ಥಿ ಸಜೀವ ದಹನ

09/10/2025 10:28 AM

Shocking: ಬೇಸರವಾಯಿತೆಂದು ತಾಯಿಯನ್ನೇ ಕೊಂದ ಪಾಪಿ ಮಗ !

09/10/2025 10:26 AM
State News
KARNATAKA

SHOCKING : ರಾಜ್ಯದಲ್ಲಿ ಘೋರ ಘಟನೆ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದ್ಯಾರ್ಥಿ ಸಜೀವ ದಹನ

By kannadanewsnow0509/10/2025 10:28 AM KARNATAKA 1 Min Read

ಕೊಡಗು : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ವಿದ್ಯಾರ್ಥಿ ಸಜೀವ ದಹನ ಆಗಿದ್ದಾನೆ. ಕಾಟಕೇರಿ ಗ್ರಾಮದ ಹರಿ ಮಂದಿರ…

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ ಪ್ರಕರಣ : ಆರೋಪಿಗಳ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

09/10/2025 10:21 AM

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಹೆಣ್ಣು ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ : ಆರೋಪಿ ಅರೆಸ್ಟ್!

09/10/2025 10:07 AM

BIG NEWS : ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದ ಪ್ರಕರಣ : ವಕೀಲನ ವಿರುದ್ಧ ಬೆಂಗಳೂರಲ್ಲಿ ‘FIR’ ದಾಖಲು

09/10/2025 9:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.