ಬೆಂಗಳೂರು: ಫೆಬ್ರವರಿ.16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನಾ ದಿನವಾದಂತ ಫೆಬ್ರವರಿ.15ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 15-02-2024ರಂದು ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 5ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ಬಜೆಟ್ ಅಧಿವೇಶನ ಹಿನ್ನಲೆ: ಫೆ.14ರಂದು ‘ಕಾಂಗ್ರೆಸ್ ಶಾಸಕಾಂಗ ಪಕ್ಷ’ದ ಸಭೆ ನಿಗದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಫೆಬ್ರವರಿ.16ರಂದು 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇದಕ್ಕೂ ಮುನ್ನವೇ ಫೆಬ್ರವರಿ.14ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಎಲ್ಲಾ ಶಾಸಕಾಂಗ ಪಕ್ಷದ ಸದಸ್ಯರು, ವಿಧಾನಸಭೆ, ಪರಿಷತ್, ಲೋಕಸಭೆ, ರಾಜ್ಯ ಸಭೆ ಹಾಗೂ ಬಾಹ್ಯ ಬೆಂಬಲಿತ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ದಿನಾಂಕ: 12-02-2024ರ ಸೋಮವಾರದಿಂದ 23-02-2024ರ ಶುಕ್ರವಾರದವರೆಗೆ 16ನೇ ವಿಧಾನಸಭೆಯ 3ನೇ ಅಧಿವೇಶನವು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿದ್ದು, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದಿ:14-02-2024ರ ಬುಧವಾರ ಸಂಜೆ 7.00 ಗಂಟೆಗೆ ಅರಮನೆ ರಸ್ತೆಯ ಸಿ.ಓ.ಡಿ. ಕಛೇರಿ ಮುಂಭಾಗದಲ್ಲಿರುವ “ಹೋಟೆಲ್ ಬ್ಯಾಡಿಸನ್ ಬ್ಲೂ (ಏಪ್ರಿಯಾ)” ಇಲ್ಲ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರು ಹಾಗೂ ವಿಧಾನ ಪಲಷತ್ತಿನ ಸಭಾ ನಾಯಕರಾದ ಮಾನ್ಯ ಶ್ರೀ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತಲರುತ್ತಾರೆ. ಆದುದರಿಂದ ತಾವುಗಳು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.
ಫೆ.25ರಂದು 1137 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ‘ಲಿಖಿತ ಪರೀಕ್ಷೆ’, ಈ ‘ನಿಯಮ’ಗಳ ಪಾಲನೆ ಕಡ್ಡಾಯ
ಸರ್ಕಾರದ ಸಾಧನೆ ಬಿಚ್ಚಿಟ್ಟ ರಾಜ್ಯಪಾಲರು: ಇದು ಗ್ಯಾರಂಟಿ, ಜನಪರ ಸರ್ಕಾರವೆಂದು ಸಾಬೀತು- ದಿನೇಶ್ ಗೂಳಿಗೌಡ