ಬೆಳಗಾವಿ: ಆರ್ ಸಿ ಬಿ ಸಂಭ್ರಮಾಚರಣೆ ದುರಂತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವುದಕ್ಕೆ ಸಂಪುಟ ಅಸ್ತು ಎಂದಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಗೃಹ ಇಲಾಖೆಗೆ ಜವಾಬ್ದಾರಿ ನೀಡಿ, ಕ್ರಿಕೆಟ್ ಮ್ಯಾಚ್ ಗಳಿಗೆ ಅವಕಾಶ ನೀಡಲಾಗಿದೆ.
ನಿವೃತ್ತ ನ್ಯಾಯಮೂರ್ತಿ ಕುನ್ಹಾ ವರದಿ ಶಿಫಾರಸ್ಸು ಅಳವಡಿಸಿಕೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಡಿಸುವುದಕ್ಕೆ ಸಂಪುಟ ಅಸ್ತು ಎಂದಿದೆ. ಕ್ರಿಕೆಟ್ ಪಂದ್ಯ ನಡೆಯುವ ಸಂದರ್ಭದಲ್ಲಿ ಭದ್ರತೆ ಬಗ್ಗೆಯೂ ಚರ್ಚೆ ನಡಸಲಾಗಿದೆ.








