ಬೆಂಗಳೂರು: ಅಕ್ಟೋಬರ್.10ರ ಗುರುವಾರದಂದು ರಾಜ್ಯ ಸಚಿವ ಸಂಪುಟ ಸಭೆ ಇರೋದಿಲ್ಲ. ವಾಲ್ಮೀಕಿ ಜಯಂತಿ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಅಕ್ಟೋಬರ್.18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದಿನ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಶಾಸಕರು, ಸಂಸದರು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಜಾತಿಗಣತಿ ವರದಿ ಜಾರಿ ವಿಚಾರವಾಗಿ ಸಂಸದರು, ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಜಾತಿಗಣತಿ ವರದಿ ಜಾರಿ ಮಡಾುವಂತೆ ಮನವಿ ಪತ್ರ ನೀಡಿದ್ದಾರೆ ಎಂದರು.
ದೇಶದಲ್ಲೇ ಮೊದಲ ಬಾರಿಗೆ ಜಾತಿ ಗಣತಿ ನಡೆಸಲಾಗಿದೆ. 2014ರಲ್ಲಿ ಕಾಂತರಾಜು ನೇತೃತ್ವದಲ್ಲಿ ಜಾತಿಗಣತಿ ನಡೆಸಲಾಗಿದೆ. ಆದರೇ ಜಾತಿಗಣತಿ ವರದಿಯನ್ನು ನಾನೇ ಇನ್ನೂ ನೋಡಿಲ್ಲ ಎಂಬುದಾಗಿ ತಿಳಿಸಿದರು.
ಅಕ್ಟೋಬರ್.10ರ ಬದಲಾಗಿ 18ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಅಂದಿನ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚಿಸಲಾಗುತ್ತದೆ. ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್
ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು