ಬೆಂಗಳೂರು: ದತ್ತಪೀಠದ ವಿವಾದ ಪರಿಹಾರ ಮಾಡುವ ವಿಚಾರವಾಗಿ ರಾಜ್ಯ ಸಚಿವ ಸಂಪುಟ ( Karnataka Cabinet Meeting ) ಉಪಸಮಿತಿಯ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ( CT Ravi ) ಅವರು ಸ್ವಾಗತಿಸಿದ್ದಾರೆ. ಇದು 4 ದಶಕಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿದ ಗೆಲುವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

BIG NEWS: ಸಂಸದ ಪ್ರತಾವ್ ಸಿಂಹ 17 ಸಿಡಿಗಳು ನನ್ನ ಬಳಿ ಇವೆ – ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೊಸ ಬಾಂಬ್

ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಂಪುಟ ಉಪಸಮಿತಿ ರಚನೆಯಾಗಿತ್ತು. ಆ ಉಪ ಸಮಿತಿಯು ಸಮಸ್ಯೆ ಪರಿಹಾರಕ್ಕೆ ಶಿಫಾರಸು ಮಾಡಿದೆ. ಉಪಸಮಿತಿ ಕೊಟ್ಟಿರುವ ವರದಿಯ ಕುರಿತು ಹೈಕೋರ್ಟ್ ಮುಂದೆ ಪ್ರಮಾಣಪತ್ರ ಸಲ್ಲಿಸಲು ಸಚಿವ ಸಂಪುಟ ಸಭೆಯು ತೀರ್ಮಾನಿಸಿದ್ದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.

ದೇವೇಗೌಡರ ಆರೋಗ್ಯದ ಬಗ್ಗೆ ಹಗುರ ಮಾತನಾಡಿದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಕ್ಷಮೆ ಕೇಳಬೇಕು – ಡಿ.ಕೆ ಸಹೋದರರ ಆಗ್ರಹ

ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡುವಂತೆ ಸುದೀರ್ಘ ಕಾಲದಿಂದ ಒತ್ತಾಯಿಸಲಾಗುತ್ತಿತ್ತು. ಆದರೆ, ಸಿದ್ದರಾಮಯ್ಯರ ನೇತೃತ್ವದ ಹಿಂದಿನ ಕಾಂಗ್ರೆಸ್ ಸರಕಾರವು ಹಿಂದೂಗಳ ಈ ಕೋರಿಕೆಯನ್ನು ಪುರಸ್ಕರಿಸಲಿಲ್ಲ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಅದನ್ನು ಪುರಸ್ಕರಿಸಿದೆ. ಇದು ದೀರ್ಘ ಕಾಲದ ಹೋರಾಟಕ್ಕೆ ಸಂದ ಜಯ ಎಂದರು.

Share.
Exit mobile version