ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪಶ್ಚಿಮ ಬಂಗಾಳದಲ್ಲಿ ಬಂಧಿಸಿದೆ. ಆರೋಪಿಗಳನ್ನು ಕೋಲ್ಕತ್ತಾದ ಅವರ ಅಡಗುತಾಣದಿಂದ ಬಂಧಿಸಲಾಗಿದೆ ಎನ್ನಲಾಗಿದೆ.
ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ ಮತ್ತು ಅಬ್ದುಲ್ ಮತೀನ್ ತಾಹಾ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಭಯೋತ್ಪಾದನಾ ವಿರೋಧಿ ಸಂಸ್ಥೆ ತಿಳಿಸಿದೆ. ಈ ನಡುವೆ ಬಂಧೀತ ಉಗ್ರರನ್ನು ಶನಿವಾರ 1:30 ಸಮಯದಲ್ಲಿ ಎನ್ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ಅವರನ್ನು ಇಂದು ಬೆಳಗ್ಗೆ ಕೊರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ಅವರನ್ನು ಹಾಜರು ಪಡಿಸಲಿದ್ದು, ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ.