ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಉಂಟಾದಂತ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿರುವಂತ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಂತ ಆಸ್ಪತ್ರೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಬಳಿಕ ಮಾತನಾಡಿದಂತ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಸೂಚಿಸಲಾಗಿದೆ ಎಂದರು.
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಆದಾಗ ಮಹಿಳೆ ಸ್ವರ್ಣಾಂಭ ಎಂಬುವರು ಸ್ಥಳದಲ್ಲೇ ಇದ್ದಿದ್ದರಿಂದ ಹೆಚ್ಚು ಗಾಯಗೊಂಡಿದ್ದಾರೆ. ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮೂವರಲ್ಲಿ ಒಬ್ಬರು ಇಂದು ಡಿಚ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಯಾವುದೇ ಭದ್ರತಾ ಲೋಪ ಆಗಿಲ್ಲ. ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಗೂ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೂ ಯಾವುದೇ ಸಂಬಂಧವಿಲ್ಲ. ಪೊಲೀಸರು ಎಲ್ಲಾ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಮಹಾ ಶಿವರಾತ್ರಿ 2024: ದಿನಾಂಕ, ಇತಿಹಾಸ, ಮಹತ್ವ, ಪೂಜಾ ಸಮಯ, ಇತರ ಮಹತ್ವದ ಮಾಹಿತಿ ಇಲ್ಲಿದೆ!