ಬೆಂಗಳೂರು : ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚಿಗೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಕುಕ್ಕಟ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಶಾರಿಕ್ ನನ್ನು ಇದೀಗ ಪೊಲೀಸರು ಬೆಂಡೆತ್ತಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
2022 ನವೆಂಬರ್ 19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಈ ಒಂದು ಘಟನೆ ಹಿಂದೆ ಉಗ್ರ ಸಂಘಟನೆಯ ಕೈವಾಡ ಇದೆ ಎಂದು ಆರೋಪಿ ಶಾರೀಕ್ ನನ್ನು ಪೊಲೀಸರು ಬಂಧಿಸಿದ್ದರು. ಇದೀಗ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವಂತಹ ಬಾಂಬ್ ಬ್ಲಾಸ್ಟಿಗೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟಿಗೂ ಸಾಮ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಷ್ಟಾರ್ಥ ಸಾಧನೆಗೆ ಮಹಾಶಿವರಾತ್ರಿಯಂದು ‘ಬಿಲ್ವಪತ್ರೆ’ ಅರ್ಪಿಸುವಾಗ ಈ ನಿಯಮ ಪಾಲಿಸಲೇಬೇಕು
ಈ ಒಂದು ಸಾಮ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಇದೀಗ ಪರಪ್ಪನ ಅಗ್ರಹಾರದಲ್ಲಿರುವ ಮಂಗಳೂರು ಕುಕ್ಕರ್ ಬ್ಲಾಸ್ಟ್ ಆರೋಪಿ ಶಾರ್ಕ್ ಹಾಗೂ ಆತನ ಸಹಚರಗಳನ್ನು ಇದೀಗ ಬೆಂಗಳೂರು ಪೊಲೀಸರು ತೀವ್ರ ವಿಚಾರಣೆಯ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚಿನ ತನಿಖೆ ನಡೆಸಲು ಎನ್ಐಗೆ ಪ್ರಕರಣ ವರ್ಗಾಯಿಸಿದೆ.
ಕೋಲಾರದಲ್ಲಿ ಕಾರು-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಬೈಕ್ ಸವಾರ ಸಾವು