Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದೇ ರಾತ್ರಿಯಲ್ಲಿ ಡಜನ್ ಭೂಕಂಪನ : ಸಿಕ್ಕಿಂ, ಉತ್ತರ ಬಂಗಾಳದಲ್ಲಿ ಭೀತಿ

08/02/2026 11:41 AM

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

08/02/2026 11:33 AM

BREAKING: ಮದುವೆ ಮನೆಯಲ್ಲಿ ಸೂತಕದ ಛಾಯೆ: ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಭೀಕರ ಅಪಘಾತಕ್ಕೆ ಬಲಿ!

08/02/2026 11:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಕ್ರೋ ಫೈನಾನ್ಸ್ ಅವರು ಮನೆ ಬಳಿ ಬಂದು ಕಿರುಕುಳ ಕೊಟ್ಟರೆ ನನಗೆ ಕರೆ ಮಾಡಿ: HDK
KARNATAKA

ಮೈಕ್ರೋ ಫೈನಾನ್ಸ್ ಅವರು ಮನೆ ಬಳಿ ಬಂದು ಕಿರುಕುಳ ಕೊಟ್ಟರೆ ನನಗೆ ಕರೆ ಮಾಡಿ: HDK

By kannadanewsnow0902/02/2025 7:26 PM

ಮಂಡ್ಯ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.

ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ ಗ್ರಾಮದಲ್ಲಿ ಶ್ರೀ ಭೂಮಿ ಸಿದ್ದೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನತೆಯನ್ನು ಉದ್ದೇಶಿಸಿ ಮಾತನಾಡಿದರು ಸಚಿವರು.

ನಿಮಗೆ ಯಾರೇ ಮೈಕ್ರೋ ಫೈನಾನ್ಸ್ ನವರು ಬಂದು ನಿನಗೆ ಕಿರುಕುಳ ನೀಡಿದರೆ ಹೆದರಬೇಡಿ. ರೌಡಿಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದರೆ ತಕ್ಷಣ ನನಗೆ ಕರೆ ಮಾಡಿ, ನಾನಿದ್ದೇನೆ. ನಿಮ್ಮ ಜೀವ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಜೀವ ತೆಗೆದುಕೊಳ್ಳುವ ಕೆಲಸ ಮಾಡಬೇಡಿ ಎಂದು ಅವರು ಹೇಳಿದರು.

ಬಡ್ಡಿ, ಚಕ್ರಬಡ್ಡಿ ವಿಧಿಸಿ ಜನರಿಗೆ ಹಿಂಸೆ ಕೊಡುತ್ತಿದ್ದಾರೆ. ಇದು ಅಮಾನವೀಯ. ಅಸಲು ತೀರುವುದೇ ಇಲ್ಲ ಎಂದ ಸಚಿವರು; ಹಳ್ಳಿಗಳ ಯುವಕರು ಆನ್ಲೈನ್ ಗೇಮ್ ಗಳ ಚಟಕ್ಕೆ ಸಿಕ್ಕಿಕೊಳ್ಳುತ್ತಿದ್ದಾರೆ. ಅಲ್ಲಿಯೂ ಸಾಲಕ್ಕೆ ಅವರು ಸಿಕ್ಕಿಕೊಂಡು ಕೊನೆಗೆ ಸಾವಿಗೆ ಶರಣಾಗುತ್ತಿದ್ದಾರೆ. ಇದು ಅತ್ಯಂತ ಧಾರುಣ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ನಾನು 2018ರಲ್ಲಿ ಸಿಎಂ ಆಗುವ ಮೊದಲು ಮಂಡ್ಯ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸರಣಿ ಸಾವುಗಳು ನನಗೆ ತೀವ್ರ ಆಘಾತ ಮಾಡುತ್ತಿದ್ದವು. ನಾನು ಮಂಡ್ಯಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ರೈತರಲ್ಲಿ ಮನವಿ ಮಾಡಿದೆ. ಆಮೇಲೆ ನಾನು ₹25,000 ಕೋಟಿ ಸಾಲ ಮನ್ನಾ ಮಾಡಿದೆ. ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನಾನೇ ಸ್ವತಃ ರಾಷ್ಟ್ರಪತಿಗಳ ಬಳಿಗೆ ಹೋಗಿ ಕಾಯ್ದೆಗೆ ಅಂಕಿತ ಹಾಕಿಸಿಕೊಂಡು ಬಂದೆ ಎಂದು ಸಚಿವರು ಹೇಳಿದರು.

ಮೈಕ್ರೋ ಫೈನಾನ್ಸ್ ಉಪಟಳ ಕೆಲ ತಿಂಗಳ ಹಿಂದೆ ಚಾಮರಾಜನಗರದಲ್ಲಿ ಆರಂಭವಾಯಿತು. ರಾಜ್ಯದ ಉದ್ದಗಲಕ್ಕೂ ಸರಣಿ ಸಾವುಗಳು ಸಂಭವಿಸುತ್ತಿವೆ. ಆದರೆ, ನಮ್ಮ ರಾಜ್ಯದ ಕಾನೂನು ಸಚಿವರು ಇನ್ನೂ ಸಮಗ್ರವಾಗಿ ಚಿಂತನೆ ಮಾಡುತ್ತಿದ್ದಾರೆ! ಬೇರೆ ಯಾವುದೇ ವಿಷಯಕ್ಕೆ ವಿದ್ಯುತ್ ವೇಗದಲ್ಲಿ ನಿರ್ಧಾರ ಕೈಗೊಳ್ಳುವ ಸರಕಾರ ಮೈಕ್ರೋ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಲು ಮೀನಮೇಷ ಎಣಿಸುತ್ತಿದೆ. ಇದು ಯಾಕೆ ಅನುಮಾನ ಕಾಡುತ್ತಿದೆ ಎಂದು ಅವರು ಹೇಳಿದರು.

ಹಳ್ಳಿಯ ಬದುಕು ಅಯೋಮಯವಾಗಿದೆ. ಹಳೆಯ ಕಾಲದ ಹಳ್ಳಿಗಳು ಮರೆಯಾಗುತ್ತಿವೆ. ಮಾನವೀಯ ಮೌಲ್ಯಗಳು ಅಳಿದು ಹೋಗುತ್ತಿವೆ. ಭಾರತ ಇಂದು ಜಗತ್ತಿನ ಮೂರನೇ ಅತಿದೊಡ್ಡ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಆದರೆ, ಸಮಾಜ ಕಲುಷಿತವಾಗುತ್ತಿದೆ. ಯುವ ಪೀಳಿಗೆ ದಾರಿ ತಪ್ಪುತ್ತಿದೆ. ನಾವು ಬೆಳೆಯಬೇಕು, ಅಭಿವೃದ್ಧಿ ಹೊಂದಬೇಕು ಹಾಗೂ ನಮ್ಮ ಸಮಾಜ ಸಂತೋಷವಾಗಿರಬೇಕು ಎಂದು ಸಚಿವರು ಆಶಿಸಿದರು.

ಹಿಂದೆ ಸಜದಲ್ಲಿ ಸೇವಾ ಮನೋಭಾವ, ನಿಸ್ವಾರ್ಥತೆ ಇತ್ತು. ಸಮಸ್ಯೆ ಬಂದರೆ ಗ್ರಾಮಸ್ಥರೇ ಕೂತು ಬಗೆಹರಿಸಿಕೊಳ್ಳುತ್ತಿದ್ದರು. ಈಗ ಅಂತಹ ಪರಿಸ್ಥಿತಿ ಇಲ್ಲ. ಸಣ್ಣ ತುಂಡು ಭೂಮಿಗಾಗಿ ಅಣ್ಣತಮ್ಮಂದಿರು ಜಗಳ ಮಾಡಿಕೊಂಡು ಪೊಲೀಸ್ ಠಾಣೆ, ಕೋರ್ಟ್ ಅಂತ ಅಲೆಯುತ್ತಿದ್ದಾರೆ. ನೆಮ್ಮದಿಯ ಬದುಕು ದೂರವಾಗಿದೆ. ಹಳ್ಳಿ ಅಭಿವೃದ್ಧಿಯಾಗಬೇಕು, ಆದರೆ ನಮ್ಮ ಮೌಲ್ಯಗಳನ್ನು ಬಿಟ್ಟು ಕೊಡಬಾರದು ಎಂದು ಸಚಿವರು ಹೇಳಿದರು.

ರಾಜಕಾರಣಕ್ಕೆ ಪರಸ್ಪರ ಜಗಳ ಬೇಡ. ನಿಮ್ಮ ಮತ ನಿಮ್ಮ ಇಷ್ಟ. ರಾಜಕಾರಣ ನಿತ್ಯದ ಕೆಲಸವಾಗಬಾರದು ಎಂದು ಅವರು ಕಿವಿಮಾತು ಹೇಳಿದರು.

ಶ್ರೀ ಆದಿಚುಂಚನಗಿರಿ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ಮಹಾಸ್ವಾಮಿಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ತಮ್ಮಣ್ಣ, ಉಪಾಧ್ಯಕ್ಷ ಶಿವಣ್ಣ ಸೇರಿದಂತೆ ಸಮಿತಿಯ ಎಲ್ಲ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಮುಂಬೈ ವಿಮಾನ ನಿಲ್ದಾಣದಲ್ಲಿ ಕಾರು ಡಿಕ್ಕಿಯಾಗಿ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಐವರಿಗೆ ಗಾಯ

SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!

Share. Facebook Twitter LinkedIn WhatsApp Email

Related Posts

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

08/02/2026 11:33 AM2 Mins Read

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

08/02/2026 11:19 AM2 Mins Read

BIG UPDATE : ಬಳ್ಳಾರಿಯಲ್ಲಿ 5 ಸಾವಿರ ವರ್ಷದ ಹಳೆಯ 2 ಮಾನವ ಅಸ್ಥಿಪಂಜರ ಪತ್ತೆ : ಉತ್ಖನನ ವೇಳೆ ಬಯಲಾಯ್ತು ಅಚ್ಚರಿ ಸಂಗತಿ.!

08/02/2026 11:13 AM1 Min Read
Recent News

ಒಂದೇ ರಾತ್ರಿಯಲ್ಲಿ ಡಜನ್ ಭೂಕಂಪನ : ಸಿಕ್ಕಿಂ, ಉತ್ತರ ಬಂಗಾಳದಲ್ಲಿ ಭೀತಿ

08/02/2026 11:41 AM

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

08/02/2026 11:33 AM

BREAKING: ಮದುವೆ ಮನೆಯಲ್ಲಿ ಸೂತಕದ ಛಾಯೆ: ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಭೀಕರ ಅಪಘಾತಕ್ಕೆ ಬಲಿ!

08/02/2026 11:25 AM

ಟಿ20 ವಿಶ್ವಕಪ್ 2026 ಪಂದ್ಯಗಳ ನೇರಪ್ರಸಾರ ವೀಕ್ಷಿಸುವುದು ಹೇಗೆ? ಸ್ವರೂಪ, ತಂಡಗಳು, ಗುಂಪುಗಳು ಮತ್ತು ಬಹುಮಾನದ ವಿವರಗಳು ಇಲ್ಲಿವೆ.

08/02/2026 11:24 AM
State News
KARNATAKA

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

By kannadanewsnow5708/02/2026 11:33 AM KARNATAKA 2 Mins Read

ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್, ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿ ಖಾಸಗಿ ಶಾಲೆಗಳಲ್ಲಿ…

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

08/02/2026 11:19 AM

BIG UPDATE : ಬಳ್ಳಾರಿಯಲ್ಲಿ 5 ಸಾವಿರ ವರ್ಷದ ಹಳೆಯ 2 ಮಾನವ ಅಸ್ಥಿಪಂಜರ ಪತ್ತೆ : ಉತ್ಖನನ ವೇಳೆ ಬಯಲಾಯ್ತು ಅಚ್ಚರಿ ಸಂಗತಿ.!

08/02/2026 11:13 AM

ಗಮನಿಸಿ : ಬರಿ ವಂಶವೃಕ್ಷವಿದ್ದರೆ ಸಾಲದು `ಪಿತ್ರಾರ್ಜಿತ ಆಸ್ತಿ’ ಪಡೆಯಲು 5 ಪ್ರಮುಖ ದಾಖಲೆಗಳು ಕಡ್ಡಾಯ.!

08/02/2026 11:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.