ಬಾಗಲಕೋಟೆ : ರಾಮ ಮಂದಿರ ಉದ್ಘಾಟನೆಯಗೆ ಆಹ್ವಾನ ನೀಡಿದರು ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸುವ ವಿಚಾರವಾಗಿ ಸಂಸದ ಅನಂತ್ ಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಳಿ ನಡೆಸಿದ್ದು ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹವರಿಂದ ಸಂಸ್ಕೃತಿಯನ್ನು ಬಯಸುವಕ್ಕೆ ಆಗುತ್ತಾ ಎಂದು ತಿರುಗೇಟು ನೀಡಿದ್ದಾರೆ.
ಕೂಡಲಸಂಗಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಅನಂತಕುಮಾರ್ ಹೆಗಡೆ ಕೇಂದ್ರ ಮಂತ್ರಿ ಆಗಿದ್ದಾಗ ನಾವು ಅಧಿಕಾರಕ್ಕೆ ಬಂದಿದ್ದೇ ಸಂವಿಧಾನ ಬದಲಾವಣೆ ಮಾಡಲು ಎಂದು ಹೇಳಿದ್ದರು. ಇಂಥವರನ್ನು ಸುಸಂಸ್ಕೃ ತರು ಎಂದು ಹೇಳಲು ಆಗುತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆ ರೀತಿಯ ಹೇಳಿಕೆ ಅವರ ಸಂಸ್ಕೃತಿ. ಅವರಿಂದ ನಾವು ಸಂಸ್ಕೃತಿ ಬಯಸಲು ಆಗುತ್ತಾ ಎಂದು ತಿರುಗೇಟು ನೀಡಿದರು.
ಇದೇ ವೇಳೆ ತಮ್ಮ ಕುರಿತು ಅವರು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿ, ಅವರ ಭಾಷೆ ಆ ರೀತಿ ಇರುತ್ತದೆ. ರಾಜ್ಯದ ಮುಖ್ಯಮಂತ್ರಿಗೆ ಗೌರವ ಕೊಡುವವರೂ ಇದ್ದಾರೆ, ಕೊಡದೇ ಇರೋರೂ ಇದ್ದಾರೆ. ರಾಜಕೀಯವಾಗಿ ಮಾತನಾಡುವವರಿಗೆ ಗೌರವ ಕೊಡಿ ಎನ್ನಲು ಆಗುತ್ತಾ? ಅವರು ರಾಜಕೀಯವಾಗಿ ಅಶ್ಲೀಲ ಪದಗಳನ್ನು ಬಳಸಿದರೆ ಅವರ ಘನತೆಗೆ ಕುಂದು ಬರುತ್ತದೇ ಹೊರತು ನನಗಲ್ಲ ಎಂದರು.