ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ( Primary School ) ವಿದ್ಯಾರ್ಥಿಗಳಿಗೆ ಮಾರಕವಾಗುವ ಮತ್ತು ಶೈಕ್ಷಣಿಕ ಗುಣಮಟ್ಟದ ಕುಸಿತಕ್ಕೆ ಕಾರಣವಾಗಬಹುದಾದ ಉದ್ದೇಶಿತ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ( Public Exam ) ಕೈಬಿಡುವಂತೆ ಆಗ್ರಹ ವ್ಯಕ್ತವಾಗುತ್ತಿದೆ.
ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಪರೀಕ್ಷೆ ಕೈ ಬಿಡುವಂತೆ ಆಗ್ರಹಿಸಿದೆ. ವೇದಿಕೆ ಸಂಸ್ಥಾಪಕ ಮಹಾಪೋಷಕ ಡಾ, ವಿ.ಪಿ ನಿರಂಜನಾರಾಧ್ಯ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ಕಳೆದ ಎರಡು ಮೂರು ವರ್ಷಗಗಳಿಂದ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಸಚಿವರು ಶಿಕ್ಷಣದ ವಿಚಾರದಲ್ಲಿ ಸಾಕಷ್ಟು ಗೊಂದಲಮಯವಾಗಿ ಕೆಲಸ ಮಾಡುತ್ತಿದ್ದಾರೆ.
ರಾಜ್ಯದ ಪ್ರಾಥಮಿಕ ಶಾಲಾ ( Primary School ) ವಿದ್ಯಾರ್ಥಿಗಳಿಗೆ ಮಾರಕವಾಗುವ ಮತ್ತು ಶೈಕ್ಷಣಿಕ ಗುಣಮಟ್ಟದ ಕುಸಿತಕ್ಕೆ ಕಾರಣವಾಗಬಹುದಾದ ಉದ್ದೇಶಿತ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇದರಿಂದ ಮಕ್ಕಳು , ಶಿಕ್ಷಕರು ಹಾಗೂ ಪೋಷಕರಲ್ಲಿ ಗೊಂದಲ ಉಂಟು ಮಾಡಲಿದೆ. ಸರ್ಕಾರದ ಈ ಅವೈಜ್ಞಾನಿಕ ನಿರ್ಧಾರ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಪ್ರಕಟಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಗೊಂದಲವನ್ನು ಉಂಟು ಮಾಡುತ್ತಿದೆ ಎಂದಿದ್ದಾರೆ.
BIGG NEWS ; ರಕ್ಷಣಾ ಕ್ಷೇತ್ರದಲ್ಲಿ ಭಾರತದ ಜೊತೆ ಕೆಲಸ ಮಾಡಲು ಬಯಸ್ತೇನೆ ; ಫ್ರಾನ್ಸ್ ರಾಯಭಾರಿ ಲೆನಿನ್
ಫೇಸ್ ಬುಕ್ ಬಳಕೆದಾರರೇ ಎಚ್ಚರ ; ನಿಮ್ಮ ‘ಪಾಸ್ ವರ್ಡ್’ ಕದಿಯುತ್ವೆ ‘ಈ 400 ಅಪ್ಲಿಕೇಶನ್’ಗಳು, ಮೆಟಾ ಎಚ್ಚರಿಕೆ