ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನಿಯೋಜನೆಯನ್ನು ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಛೇರಿಗಳಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಕಛೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಜಿಲ್ಲಾ ಆಸತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನೌಕರರು ಕ್ಷೇತ್ರೀಯ ಮಟದಲ್ಲಿ ಕಾರ್ಯನಿರ್ವಹಿಸಬೇಕಾದ ಸಿಬ್ಬಂದಿಗಳಾಗಿದ್ದು, ಅವರು ಜಿಲ್ಲಾ ಮಟ್ಟ / ತಾಲ್ಲೂಕು ಮಟ್ಟದ ಕಛೇರಿ /ಆಸ್ಪತ್ರೆಗಳಲ್ಲಿ ನಿಯುಕ್ತಿಗೊಂಡು ಯಾವುದೇ ಕ್ಷೇತೀಯ ಕೆಲಸ / ಕಾರ್ಯಗಳನ್ನು ನಿರ್ವಹಿಸುತ್ತಿರುವುದಿಲ್ಲ. ಕ್ರಮ ಬದ್ಧವಾಗಿ ಜನ ಸಂಖ್ಯೆ ಹಂಚಿಕೆಯಾಗಿರುವುದಿಲ್ಲ. ಸದರಿ ಸಿಬ್ಬಂದಿಯನ್ನು ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಅನುಕೂಲವಾಗುವಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಕ್ಷೇತ್ರ ಮಟ್ಟಕ್ಕೆ ನಿಯೋಜಿಸಲು ಶಿಫಾರಸ್ಸು ಮಾಡಿದೆ ಎಂದಿದ್ದಾರೆ.
ಹೀಗಾಗಿ ಸದರಿ ಸಿಬ್ಬಂದಿಗಳನ್ನು ಕ್ಷೇತ್ರೀಯ ಮಟದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸ್ಥಳ ನಿಯುಕ್ತಿಗೊಳಿಸಬಹುದಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಜಿಲ್ಲಾ ಆಸ್ಪತ್ರೆ, Autonomous institutions ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನೌಕರರ ಕಾರ್ಯನಿರತ ಸಂಖ್ಯೆ ವಿವರವನ್ನು ಈ ಕೆಳಕಂಡಂತೆ ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಕಛೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಜಿಲ್ಲಾ ಆಸ್ಪತ್ರೆ Autonomous institutions ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಮಂಜೂರಾದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನೌಕರರನ್ನು ಜಿಲ್ಲೆಗಳಲ್ಲಿನ ಕ್ಷೇತ್ರೀಯ ಮಟ್ಟದ ಆರೋಗ್ಯ ಸಂಸ್ಥೆ / ಆರೋಗ್ಯ ಕೇಂದ್ರಗಳಲ್ಲಿನ ಅಗತ್ಯವಿರುವ ಖಾಲಿ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) ನಿಯಮಗಳು, 2025 ರ ನಿಯಮ 15(1)(c) ರಂತ ನಿಯಮಾನುಸಾರ ವರ್ಗಾಯಿಸಿ ಮರುಹಂಚಿಕೆ ಮಾಡಲು ತೀರ್ಮಾನಿಸಲಾಗಿದ. ಅದರಂತ ನಿಯೋಜನೆಗಳನ್ನು ರದ್ದುಪಡಿಸುವ ಸಂಬಂಧ ಈ ಕೆಳಕಂಡ ಆದೇಶಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಎಲ್ಲಾ ನಿಯೋಜನೆಗಳನ್ನು ರದ್ದು ಮಾಡಲಾಗಿದೆ.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ (Sr HIO) & ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (Sr PHCO) ರವರುಗಳ ಪೈಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಛೇರಿಗಳಾದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಕಛೇರಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ (Sr HIO) ಮತ್ತು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (Sr PHCO) ರವರುಗಳನ್ನು ಕೆಳಕಂಡ ಕೋಷ್ಟಕದಲ್ಲಿ ನಮೂದಿಸಿರುವ ಹಾಗೆ ಉಳಿಸಿಕೊಂಡು, (ಒಂದು ವೇಳೆ ಕೆಳಗೆ ತಿಳಿಸಿರುವ ಸಂಸ್ಥೆಗಳಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ / ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (Sr HIO/Sr PHCO) ಹುದ ಮಂಜೂರಾಗಿರದಿದ್ದಲ್ಲಿ, ಬದಲಾಗಿ ಆರೋಗ್ಯ ನಿರೀಕ್ಷಣಾಧಿಕಾರಿ / ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (HIO/PHCO) ಗಳನ್ನು ಪರಿಗಣಿಸುವುದು). ಎಲ್ಲಾ ನಿಯೋಜನಗಳನ್ನು ರದ್ದುಗೊಳಿಸುವುದು ಹಾಗೂ ಹೆಚ್ಚುವರಿ ಹುದ್ದೆಗಳನ್ನು lien ಸಮೇತ ಅಗತ್ಯವಿರುವ ಕ್ಷೇತ್ರೀಯ ಮಟ್ಟದ ಆರೋಗ್ಯ ಸಂಸ್ಥೆಗಳಿಗೆ ವರ್ಗಾಯಿಸಿ ಮರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.
ವಸಂತ ಬಿ ಈಶ್ವರಗೆರೆ.., ಸಂಪಾದಕರು
ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK
‘ಶ್ರೀರಂಗಪಟ್ಟಣ ದಸರಾ’ಗೆ ಮುಹೂರ್ತ ಫಿಕ್ಸ್: ಸೆ.25ರಿಂದ ನಾಲ್ಕು ದಿನ ಆಚರಣೆ