ಭೂಪಾಲ್:ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಭಾನುವಾರ ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕ್ಯಾನ್ಸರ್ ಔಷಧಿಗಳು ಅಗ್ಗವಾಗಲಿವೆ ಮತ್ತು ದೇಶದ ಪ್ರತಿ ಜಿಲ್ಲೆಯಲ್ಲೂ ಡೇ ಕೇರ್ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ಪಿಎಂ ಮೋದಿ ಹೇಳಿದರು.ಈ ವರ್ಷದ ಬಜೆಟ್ನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡಲು ಅನೇಕ ಘೋಷಣೆಗಳನ್ನು ಮಾಡಲಾಗಿದೆ ಮತ್ತು ಕ್ಯಾನ್ಸರ್ ಔಷಧಿಗಳನ್ನು ಅಗ್ಗವಾಗಿಸಲು ಮೋದಿ ನಿರ್ಧರಿಸಿದ್ದಾರೆ. ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲೂ ಕ್ಯಾನ್ಸರ್ ಡೇ ಕೇರ್ ಕೇಂದ್ರಗಳನ್ನು ತೆರೆಯಲಾಗುವುದು” ಎಂದರು.
ತಮ್ಮ ಭಾಷಣದಲ್ಲಿ, ಮಹಾಕುಂಭವನ್ನು ಯಶಸ್ವಿ ಘಟನೆಯನ್ನಾಗಿ ಮಾಡುವಲ್ಲಿ ‘ಸಫಾಯಿ ಕರ್ಮಿಗಳು’ (ನೈರ್ಮಲ್ಯ ಕಾರ್ಮಿಕರು) ಮತ್ತು ಪೊಲೀಸ್ ಸಿಬ್ಬಂದಿಯ ಉತ್ತಮ ಕೆಲಸವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು, ಈ “ಏಕತೆಯ ಮಹಾನ್ ಕುಂಭ”ದಲ್ಲಿ, ಸಾವಿರಾರು ವೈದ್ಯರು ಮತ್ತು ಸ್ವಯಂಸೇವಕರು ಸಮರ್ಪಣೆ ಮತ್ತು ಸೇವಾ ಮನೋಭಾವದಿಂದ ಸ್ವಯಂಪ್ರೇರಣೆಯಿಂದ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು. ಏಕತೆಯ ಈ ಮಹಾನ್ ಕುಂಭಕ್ಕೆ ಹೋಗುವ ಜನರು ಈ ಪ್ರಯತ್ನಗಳನ್ನು ಶ್ಲಾಘಿಸುತ್ತಿದ್ದಾರೆ” ಎಂದು ಅವರು ಹೇಳಿದರು