ಬೆಂಗಳೂರು : ಪಿಜಿ ಸಿಇಟಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದ್ದು, ಪರೀಕ್ಷಾ ಕೇಂದ್ರಗಳ ನಮೂದು, ಶುಲ್ಕ ಪಾವತಿ ಮತ್ತು ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿಗೆ ಅವಕಾಶ ನೀಡಿದೆ.
2024-25ನೇ ಸಾಲಿನ ಎಂಬಿಎ / ಎಂಸಿಎ / ಎಂಇ / ಎಂ.ಟೆಕ್ / ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕಾಗಿ, ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು, ಪರೀಕ್ಷಾ ಕೇಂದ್ರಗಳನ್ನು ನಮೂದಿಸಲು ಹಾಗೂ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು 22-06-2024 ರಿಂದ 24-06-2024 ರ ಸಂಜೆ 6.00 ‘ರವರೆಗೆ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ.