ನವದೆಹಲಿ: ಯುದ್ಧ ಪೀಡಿತ ಪ್ರದೇಶ ಉಕ್ರೇನ್ನಿಂದ ಭಾರತಕ್ಕೆ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತೀಯ ಕಾಲೇಜುಗಳಲ್ಲಿ ವ್ಯಾಸಾಂಗ ಮುಂದುವರೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕಾನೂನಿನಲ್ಲಿ ಈ ಕುರಿತು ಯಾವುದೇ ಅವಕಾಶ ಇಲ್ಲದಿರುವ ಕಾರಣ ಹಾಗೂ ಯಾವುದೇ ಭಾರತೀಯ ವೈದ್ಯಕೀಯ ಸಂಸ್ಥೆ/ವಿಶ್ವವಿದ್ಯಾಲಯಕ್ಕೆ ಯಾವುದೇ ವಿದೇಶಿ ವೈದ್ಯಕೀಯ ವಿದ್ಯಾರ್ಥಿಗಳನ್ನು ವರ್ಗಾಯಿಸಲು ಅಥವಾ ವಸತಿ ಕಲ್ಪಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಇಲ್ಲಿಯವರೆಗೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಅಫಿಡವಿಟ್ನಲ್ಲಿ ಕೇಂದ್ರ ಹೇಳಿದೆ.
ತಮ್ಮ ವಿದೇಶಿ ವೈದ್ಯಕೀಯ ಕಾಲೇಜುಗಳು/ವಿಶ್ವವಿದ್ಯಾಲಯಗಳಲ್ಲಿ ಪ್ರಥಮ ಮತ್ತು ನಾಲ್ಕನೇ ವರ್ಷದ ಬ್ಯಾಚ್ಗಳ ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದು, ಪ್ರಾಥಮಿಕವಾಗಿ ತಮ್ಮ ಆಯಾ ಸೆಮಿಸ್ಟರ್ಗಳಲ್ಲಿ ಭಾರತದಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆಯನ್ನು ಬಯಸುತ್ತಿರುವ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳ ಬ್ಯಾಚ್ನಲ್ಲಿ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದೆ.
ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಹಾಗೂ ವಿದೇಶಗಳಲ್ಲಿ ಕೈಗೆಟಕುವ ದರದಲ್ಲಿ ವೈದ್ಯಕೀಯ ಶಿಕ್ಷಣ ದೊರೆಯುತ್ತಿದೆ ಎಂಬ ಕಾರಣಗಳಿಂದಾಗಿ ಈ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಿದ್ದರು. ಇದೀಗ ವಾಪಸ್ ಆಗಿರುವ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಮಂಡಳಿ ಕಾಯಿದೆ 1956 ಅಥವಾ ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ 2019ರ ಪ್ರಕಾರ ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ವರ್ಗಾಯಿಸುವುದಕ್ಕೆ ಅವಕಾಶವಿಲ್ಲ. ಇದು ನಮ್ಮ ದೇಶದ ವೈದ್ಯಕೀಯ ಶಿಕ್ಷಣ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಸಚಿವಾಲಯ ತಿಳಿಸಿದಿದೆ.
ಉಕ್ರೇನ್ನಲ್ಲಿ ಯುದ್ಧ ಪ್ರಾರಂಭವಾದ ನಂತ್ರ, ಅಲ್ಲಿಂದ ಭಾರತೀಯ ವಿದ್ಯಾರ್ಥಿಗಳು ವಾಪಸ್ ಆಗಿದ್ದರು. ತಮ್ಮ ವಿದ್ಯಾಭ್ಯಾಸ ಪೂರ್ಣಗೊಳಿಸಿಕೊಳ್ಳುವ ದೃಷ್ಟಿಯಿಂದ
ಭಾರತದಲ್ಲಿ ವೈದ್ಯಕೀಯ ವ್ಯಾಸಂಗ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಕೋರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಸಲ್ಲಿಸಿರುವ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಇಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
BIGG NEWS : ಮಕ್ಕಳ ಕಳ್ಳರ ವದಂತಿ : ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ