ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ, ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್‌.ಅಶೋಕ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ ತನಿಖೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದೆ. ಜನರು ಹೇಳಿದ್ದನ್ನು ಕೇಳಿಯೇ ಹಾಗೆ ಟ್ವೀಟ್‌ ಮಾಡಿದ್ದೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದು ಸಚಿವರೇ ಹೇಳಿದ್ದರು. ಬಳಿಕ ಅದು ನಿಜ ಎಂದು ಸಾಬೀತಾಯಿತು. ಹಾಗಾದರೆ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ ಎಂದು … Continue reading ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ, ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್‌.ಅಶೋಕ್