ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ವರ್ಲಿ ಸಾರಿಗೆ ಇಲಾಖೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಲಾದ ಸಂದೇಶದಲ್ಲಿ ಖಾನ್ ಅವರನ್ನು ಅವರ ಮನೆಯಲ್ಲಿ ಕೊಲ್ಲುವುದಾಗಿ ಮತ್ತು ಅವರ ಕಾರನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ
ಅಪರಿಚಿತ ವ್ಯಕ್ತಿಗಳ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕಿತನನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ