ಬೆಂಗಳೂರಲ್ಲಿ ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು : ಅದೃಷ್ಟವಶಾತ್ ಮೂವರು ಪಾರು!

ಬೆಂಗಳೂರು : ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ನಡುರಸ್ತೆಯಲ್ಲೇ ಬೆಳಗ್ಗೆ 7:30 ರ ಸುಮಾರಿಗೆ ವರ್ಣ ಕಾರು ಧಗಧಗನೆ ಬೆಂಕಿಗೆ ಆಹುತಿಯಾಗಿದೆ. ಯಶವಂತಪುರದಿಂದ ಟಾಟಾ ಇನ್ಸ್ಟಿಟ್ಯೂಟ್ ಕಡೆಗೆ ಹೋಗುವ ರಸ್ತೆಯಲ್ಲಿ ಘಟನೆ ನಡೆದಿದೆ.‌ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.ಬೆಂಕಿಗಾಹುತಿಯಾದ ವೈಟ್ ಬೋರ್ಡ್ ವರ್ಣ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಸ್ಟಾರ್ಟ್ ಮಾಡಿ ಕೇವಲ ಒಂದು ಕಿಮೀ ದೂರ ಕ್ರಮಿಸಲಾಗಿತ್ತು. ಕಾರಿನ‌ ಇಂಜಿನ್ ಭಾಗದಲ್ಲಿ … Continue reading ಬೆಂಗಳೂರಲ್ಲಿ ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು : ಅದೃಷ್ಟವಶಾತ್ ಮೂವರು ಪಾರು!