ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿಯಲ್ಲಿನ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರ್ ಬಾಂಬ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಭವಿಸಿದ ಸ್ಫೋಟದ ನಂತರ ಹಲವಾರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಪ್ರದೇಶವನ್ನು ಸುತ್ತುವರೆದಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಈ ಬಾಂಬ್ ಸ್ಪೋಟ ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.








