ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್ ನಕಲಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿದ್ದಂತ ಬರೋಬ್ಬರಿ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದು ಪಡಿಸಲಾಗಿದೆ.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.@CMofKarnataka @siddaramaiah @SantoshSLadINC pic.twitter.com/WEHap32Lrh
— DIPR Karnataka (@KarnatakaVarthe) March 5, 2025
ಪ್ರಗತಿ ಪಥ ಯೋಜನೆಯಡಿ 7,110 ಕಿಲೋಮೀಟರ್ ಗ್ರಾಮೀಣ ರಸ್ತೆ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ
ಪಿಎಂಜಿಎಸ್‌ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ₹5,190 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಮುಜರಾಯಿ ದೇವಸ್ಥಾನಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಹೆಮ್ಮೆಯ ‘ನಂದಿನಿ’ ಉತ್ತರ ಪ್ರದೇಶಕ್ಕೂ ಎಂಟ್ರಿ: ‘ಹತ್ರಾಸ್’ನಲ್ಲಿ ‘ಹಾಲು ಮಾರಾಟ’ ಆರಂಭ | Nandini Milk