Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ‘KSRTC ಬಸ್ಸು’ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದು ನಿಷೇಧ: ರಾಜ್ಯ ಸರ್ಕಾರ ಆದೇಶ
KARNATAKA

ಇನ್ಮುಂದೆ ‘KSRTC ಬಸ್ಸು’ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದು ನಿಷೇಧ: ರಾಜ್ಯ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಖಾಸಗಿ ಬಸ್ ಅಪಘಾತದ ನಂತ್ರ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿದ್ದರು. ಈ ದುರಂತದ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಸ್ಪೋಟಗೊಳ್ಳುವಂತ ವಸ್ತುಗಳನ್ನು ಪ್ರಯಾಣಿಕರು ಕೊಂಡೊಯ್ಯೋದಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಸುರಕ್ಷತೆಯ ದೃಷ್ಠಿಯಿಂದ ಪ್ರಯಾಣಿಕರ ಪ್ರತಿ ಬ್ಯಾಗ್ ಚೆಕ್ ಮಾಡುವಂತೆಯೂ ರಾಜ್ಯ ಸರ್ಕಾರ ಸೂಚಿಸಿದೆ.

ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು‌ ತಮ್ಮ ಪ್ರಾಣ ಕಳೆದುಕೊಂಡಿದ್ದರು ಎಂದು ಹೇಳಿದ್ದಾರೆ.

ನಾನು ಆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸುಮಾರು 50000 ವಾಹನಗಳಲ್ಲಿ ( ಸಾರಿಗೆ ಸಂಸ್ಥೆಗಳ ಬಸ್ಸುಗಳು, ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು, ಖಾಸಗಿ ಟೂರಿಸ್ಟ್ ಬಸ್‌ಗಳು, ಟೆಂಪೋ ಟ್ರಾವೆಲರ್ಸ್‌‌, ಶಾಲಾ ವಾಹನಗಳು ಸೇರಿ) ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯ ಅಳವಡಿಸುವಂತೆ ಮತ್ತು ಸರ್ಮಪಕವಾಗಿ ದ್ವಾರ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಲು ಒಂದು ಅಭಿಯಾನವನ್ನೇ ಕೈಗೆತ್ತಿಕೊಂಡಿದ್ದರಿಂದ, ಹಲವು ಬಸ್ಸುಗಳಲ್ಲಿನ ಲೋಪದೋಷಗಳು ಗಮನಕ್ಕೆ‌‌ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ‌ ಕಡ್ಡಾಯವಾಯಿತು ಎಂದಿದ್ದಾರೆ.

ಮುಂದುವರೆದು, ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು/ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿ ಸ್ಪರ್ಷಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ‌ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ಈ‌ ಮೇಲಿನ ಯಾವುದೇ ನೂನ್ಯತೆ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ‌ ನಷ್ಟ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ‌ ಕೂಡಲೇ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಕುರಿತಂತೆ ಮಹತ್ವದ ಮಾಹಿತಿ

ALERT : ನೀವು ಸೇವಿಸುವ `ಮಾತ್ರೆಗಳು’ ಅಸಲಿಯೋ ನಕಲಿಯೋ? ಜಸ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ.!

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.