ಜೋಧ್ಪುರ: ರಾಜಸ್ಥಾನದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಜೋಧ್ಪುರದಲ್ಲಿ ಮಳೆ ನೀರಿಗೆ ಕಾರುಗಳು ಕೊಚ್ಚಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.
ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿಯುತ್ತಿದ್ದು, ಒಂದೆರಡು ಕಾರುಗಳು ರಸ್ತೆಗಳ ಮೂಲಕ ಹರಿಯುವ ನೀರಿನಲ್ಲಿ ಕೊಚ್ಚಕೊಂಡು ಹೋತ್ತಿರುವ ದೃಶ್ಯಗಳು ಸೆರೆಯಾಗಿದೆ.
#WATCH | Rajasthan: Cars washed away in Jodhpur after heavy rain triggered a flood-like situation late last night, July 25 pic.twitter.com/cfbtpZrnCv
— ANI MP/CG/Rajasthan (@ANI_MP_CG_RJ) July 25, 2022
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೋಧ್ಪುರ ಜಿಲ್ಲಾಧಿಕಾರಿ ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಇತ್ತ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮಳೆ ಸಂಬಂಧಿತ ಘಟನೆಗಳಲ್ಲಿ 4 ಮಕ್ಕಳು ಸೇರಿದಂತೆ 5 ಜನರು ಸಾವನ್ನಪ್ಪಿದ್ದು, ಸಂತಾಪ ಸೂಚಿಸಿದ್ದಾರೆ.
ಜೋಧ್ಪುರದಲ್ಲಿ (ರಾಜಸ್ಥಾನ) ಭಾರೀ ಮಳೆಯಿಂದಾಗಿ ನಾಲ್ವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವುದು ತುಂಬಾ ದುಃಖ ತಂದಿದೆ. ಅಗಲಿದ ಆತ್ಮಗಳಿಗೆ ಶಾಂತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕುಟುಂಬಸ್ಥರಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಬಿರ್ಲಾ ಟ್ವೀಟ್ ಮಾಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪಶ್ಚಿಮ ರಾಜ್ಯಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಮಾನ್ಸೂನ್ ತೊಟ್ಟಿ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 27 ರಿಂದ ಉತ್ತರದ ಕಡೆಗೆ ಅದರ ಸಾಮಾನ್ಯ ಸ್ಥಿತಿಗೆ ಚಲಿಸುವ ಸಾಧ್ಯತೆಯಿದೆ ಎಂದು IMD ಹೇಳಿದೆ.
Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : `ರೈತ ಶಕ್ತಿ ಯೋಜನೆ’ಯಡಿ `ಡಿಸೇಲ್ ಸಹಾಯಧನ