ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್(Mann Ki Baat)’ ರೇಡಿಯೋ ಭಾಷಣಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದಾಗಿ ಹೇಳಿ ಹಣ ಸಂಗ್ರಹಿಸಿ ಜನರನ್ನು ವಂಚಿಸಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆರೋಪಿಯನ್ನು ಸ್ಥಳೀಯ ಪತ್ರಿಕೆಯ ಸಂಪಾದಕ ಅಲೋಕ್ ತಿವಾರಿ ಎಂದು ಗುರುತಿಸಲಾಗಿದೆ. “ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ,” ಎಂದು ಪೊಲೀಸ್ ಉಪ ಆಯುಕ್ತ(ಡಿಸಿಪಿ)ರು ಪ್ರಶಾಂತ್ ಕದಮ್ ತಿಳಿಸಿದ್ದಾರೆ.
2023 ರಲ್ಲಿ ರಾಷ್ಟ್ರಪತಿಗಳು ಬಿಡುಗಡೆ ಮಾಡಲಿರುವ ಸಾರ್ ಗ್ರಂಥ ಎಂಬ ಪುಸ್ತಕವನ್ನು ಪ್ರಕಟಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಅವರು ಈ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾರೆ ಮತ್ತು ಇದಕ್ಕಾಗಿ ಅವರು ದೊಡ್ಡ ಕೈಗಾರಿಕೋದ್ಯಮಿಗಳು ಮತ್ತು ಇತರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕದಮ್ ಹೇಳಿದರು.
ಮನ್ ಕಿ ಬಾತ್ ಮಾಸಿಕ ರೇಡಿಯೋ ಪ್ರಸಾರವಾಗಿದ್ದು, ಪ್ರತಿ ತಿಂಗಳ ಕೊನೆಯ ಭಾನುವಾರ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಈ ಕಾರ್ಯಕ್ರಮ ಆಲ್ ಇಂಡಿಯಾ ರೇಡಿಯೋ, ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್ನಲ್ಲಿ ಪ್ರಸಾರವಾಗುತ್ತದೆ.
SHOCKING NEWS: ಕ್ಯಾಬ್ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗುವನ್ನು ತಳ್ಳಿದ ದುರುಳರು, ಮಗು ಸ್ಥಳದಲ್ಲೇ ಸಾವು
BIG NEWS : ನಾಳೆಯಿಂದ ʻAppleʼ ಬಳಕೆದಾರರಿಗೆ ಹೆಚ್ಚಿನ ಬೆಲೆಗೆ ‘ಟ್ವಿಟರ್ ಬ್ಲೂ’ ಸೇವೆ ಮರುಪ್ರಾರಂಭ | Twitter Blue
SHOCKING NEWS: ಕ್ಯಾಬ್ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗುವನ್ನು ತಳ್ಳಿದ ದುರುಳರು, ಮಗು ಸ್ಥಳದಲ್ಲೇ ಸಾವು