Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 19ನೇ ರೋಜ್ ಗಾರ್ ಮೇಳ : 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ | WATCH VIDEO

BREAKING : ಲಡಾಖ್ ನಲ್ಲಿ ಭಾರತೀಯ ಸೇನೆಯ `ಚೀತಾ ಹೆಲಿಕಾಪ್ಟರ್’ ಪತನ: ಮೇಜರ್ ಜನರಲ್ ಸೇರಿದಂತೆ ಮೂವರಿಗೆ ಗಾಯ | Cheetah helicopter crashes

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!
KARNATAKA

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ!

By ಸುರೇಶ್‌

ದಕ್ಷಿಣಕನ್ನಡ : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ರಹಸ್ಯವೊಂದು ಬಯಲಾಗಿದ್ದು, ಡಿಎನ್‌ಎ ಪರೀಕ್ಷೆಯಲ್ಲಿ ಆತನೇ ಮಗುವಿನ ತಂದೆ ಎಂದು ದೃಢಪಟ್ಟಿದೆ.

ಹೌದು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಪ್ರಕರಣ ಈಗ ಮಹತ್ವದ ಘಟ್ಟ ತಲುಪಿದೆ. ಯುವತಿಗೆ ಜನಿಸಿದ್ದ ಮಗುವಿನ ತಂದೆ ಆರೋಪಿ ಕೃಷ್ಣ ಜೆ.ರಾವ್ ಎಂಬುದು ಡಿಎನ್​ಎ ಪರೀಕ್ಷೆಯಿಂದ ದೃಢಪಟ್ಟಿರುವುದಾಗಿ ಯುವತಿಯ ಕುಟುಂಬದವರು ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆಪಿ ನಂಜುಂಡಿ ತಿಳಿಸಿದ್ದಾರೆ.

ಆರೋಪಿ ಕೃಷ್ಣ ಜೆ ರಾವ್ ಹಾಗೂ ಸಂತ್ರಸ್ತೆ ಶಾಲಾ ದಿನಗಳಿಂದಲೂ ಪರಿಚಿತರು ಎನ್ನಲಾಗಿದೆ. ಮದುವೆಯಾಗುವ ಭರವಸೆ ನೀಡಿ ಆರೋಪಿಯು ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಪರಿಣಾಮವಾಗಿ ಆಕೆ ಗರ್ಭವತಿಯಾಗಿದ್ದಳು. ನಂತರ ಕುಟುಂಬದವರು ಮಾತುಕತೆ ನಡೆಸಿ ಮದುವೆ ಮಾಡುವ ಭರವಸೆ ನೀಡಿದ್ದರು.

ಅದಾದ ಬಳಿಕ ಯುವತಿಗೆ ಹೆರಿಗೆ ಸಮಯ ಬಂದಾಗ ಆರೋಪಿ ಕುಟುಂಬದವರು ಮದುವೆಗೆ ನಿರಾಕರಿಸಿದ್ದರು. ಹೀಗಾಗಿ ಸಂತ್ರಸ್ತೆ ಪೊಲೀಸ್ ದೂರು ನೀಡಿದ್ದಳು. ಬಳಿಕ ಎಫ್​ಐಆರ್ ದಾಖಲಾಗಿತ್ತು. ಇಷ್ಟರಲ್ಲಿ ಆರೋಪಿ ನಾಪತ್ತೆಯಾಗಿದ್ದ. ನಂತರ ಆತನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದ.

ಇದೀಗ ಪುತ್ತೂರು ನ್ಯಾಯಾಧೀಶರ ಸಮ್ಮುಖದಲ್ಲಿ ಆರೋಪಿ ಕೃಷ್ಣ ಜೆ.ರಾವ್, ಸಂತ್ರಸ್ತೆ ಹಾಗೂ ಮಗುವಿನ ರಕ್ತ ಸಂಗ್ರಹಿಸಲಾಗಿತ್ತು. ಬಳಿಕ ಬೆಂಗಳೂರಿನ ಪ್ರಯೋಗಾಲಯಕ್ಕೆ ರಕ್ತ ಸಂಗ್ರಹ ಮಾದರಿಯನ್ನು ಕಳುಹಿಸಲಾಗಿತ್ತು. ಆರೋಪಿ ಕೃಷ್ಣ ಜೆ.ರಾವ್ ಕುಟುಂಬ ಡಿಎನ್ಎ ಟೆಸ್ಟ್ ಮಾಡಿಸುವಂತೆ ಒತ್ತಾಯಿಸಿತ್ತು. ಇದೀಗ ಡಿಎನ್ಎ ಟೆಸ್ಟ್​​ ಪಾಸಿಟಿವ್ ಬಂದಿದೆ. ಕೃಷ್ಣ ಜೆ.ರಾವ್​​ನಿಂದಲೇ ಸಂತ್ರಸ್ತೆ ಗರ್ಭಾವತಿಯಾಗಿರುವುದು ಸಾಬೀತಾಗಿದೆ.

ಹೀಗಾಗಿ ಹಿಂದೂ ಸಂಘಟನೆಗಳೇ ಮುಂದೆ ನಿಂತು ಇಬ್ಬರ ಮದುವೆ ಮಾಡಿಸಬೇಕು. ನಮಗೆ ಕಾನೂನು ಹೋರಾಟಕ್ಕೆ ಇಷ್ಟವಿಲ್ಲ. ಇಬ್ಬರು ಒಂದಾಗಿ ಬಾಳಬೇಕು ಎಂಬುದು ನಮ್ಮ ಇಚ್ಛೆ. ಹಿಂದುತ್ವದ ಭದ್ರಕೋಟೆ ಪುತ್ತೂರಿನಲ್ಲಿರುವ ಹಿಂದೂ ಮುಖಂಡರು ಮುಂದೆ ಬರಬೇಕು. ಎರಡೂ ಕುಟುಂಬಗಳನ್ನು ಒಂದು ಮಾಡುವ ಕೆಲಸ ಮಾಡಬೇಕು ಎಂದು ಕೆಪಿ ನಂಜುಂಡಿ ಆಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

2 Mins Read

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

2 Mins Read

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

2 Mins Read
Recent News

BREAKING : 19ನೇ ರೋಜ್ ಗಾರ್ ಮೇಳ : 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ | WATCH VIDEO

BREAKING : ಲಡಾಖ್ ನಲ್ಲಿ ಭಾರತೀಯ ಸೇನೆಯ `ಚೀತಾ ಹೆಲಿಕಾಪ್ಟರ್’ ಪತನ: ಮೇಜರ್ ಜನರಲ್ ಸೇರಿದಂತೆ ಮೂವರಿಗೆ ಗಾಯ | Cheetah helicopter crashes

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

State News
KARNATAKA

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ಪ್ರತಿ ವರ್ಷವೂ ಬೇಸಿಗೆಯ ಬಿಸಿಲು ಹಳೆಯ ದಾಖಲೆಗಳನ್ನು ಮುರಿಯುತ್ತಾ ಸಾಗುತ್ತಿದೆ. ತಾಪಮಾನವು 45°C ಅಥವಾ 48°C ದಾಟಿದಾಗ, “ಈ…

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

BIG NEWS : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣ : ಲೋಕಾಯುಕ್ತದಿಂದ ತನಿಖಾ ವರದಿ ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.