ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪಾಲಿಕೆಯ ಕಾಂಗ್ರೆಸ್ ಸದಸ್ಯ ಆಗಿರುವ ಸುವರ್ಣ ಕಲ್ಲಕುಂಟ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿಯ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದರು ಈ ವೇಳೆ ಕಾಂಗ್ರೆಸ್ ಸದಸ್ಯ ಸುವರ್ಣ ಕುಸಿದು ಬಿದ್ದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ವೇಳೆ ಸುವರ್ಣ ಕುಸಿದು ಬಿದ್ದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ತಕ್ಷಣ ಪೊಲೀಸರು ಸುವರ್ಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ನಿನ್ನೆ ರಾತ್ರಿ ಸುವರ್ಣ ಕಲ್ಲು ವಿರುದ್ಧ ದೂರು ದಾಖಲಾಗಿತ್ತು. ಹುಬ್ಬಳ್ಳಿಯ ಕೇಶವಪುರ ಪೊಲೀಸ್ ಠಾಣೆಯಲ್ಲಿ ಕೆಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಸುವರ್ಣ ನಾಪತ್ತೆಯಾಗಿದ್ದರು.








