ಬೆಳಗಾವಿ: ಮಂಡ್ಯದಲ್ಲಿ 2022ರಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಪ್ರಕರಣವನ್ನು ಈ ಹಿಂದಿನ ಬಿಜೆಪಿ ಸರ್ಕಾರ ಮುಚ್ಚಿಹಾಕಿತ್ತು. ಈ ಪ್ರಕರಣವನ್ನು ರೀ ಓಪನ್ ಮಾಡಲಾಗುತ್ತದೆ. ಪಾಕಿಸ್ತಾನ ಪರ ಘೋಷಣೆ ಕೂಗಿದಂತವನನ್ನು ಸಹ ಬಂಧನ ಮಾಡುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಬೆಳಗಾವಿಯ ಅಥಣಿಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನು. ಆ ಕೇಸನ್ನು ಬಿಜೆಪಿಯವರು ಮುಚ್ಚಿಹಾಕಿದ್ದಾರೆ. ಆದರೇ ನಾವು ಆ ಪ್ರಕರಣವನ್ನು ಮರು ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಪ್ರಕರಣವನ್ನು ರೀ ಓಪನ್ ಮಾಡಿಸಿ, ಆರೋಪಿಯನ್ನು ಬಂಧಿಸೋದಾಗಿ ತಿಳಿಸಿದರು.
ಎರಡು ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಮುಂಬರುವಂತ ಲೋಕಸಭಾ ಚುನಾವಣೆಗೆ 2-3 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗುತ್ತದೆ. ನಿಮ್ಮ ಕೆಲಸ ಮಾಡಿದ್ದೇವೆ, ನಮಗೆ ಕೂಲಿ ರೂಪದಲ್ಲಿ ಮತ ನೀಡಿ. ಜಿಲ್ಲೆಯಿಂದ ಕಾಂಗ್ರೆಸ್ನ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ಗೆ ಲೋಕಸಭಾ ಚುನಾವಣೆಗೆ ‘ಕರಡು ಪ್ರಣಾಳಿಕೆ’ ಸಲ್ಲಿಕೆ
‘ಏರ್‌ಪೋರ್ಟ್’ಗೆ ಬರಲು ತಡ ಮಾಡಿದ ‘ಪತ್ನಿ’: ‘ಪತಿ’ ಮಾಡಿದ್ದೇನು ಗೊತ್ತಾ?